Home_Page_Advt
Home_Page_Advt
Home_Page_Advt

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನೆಹರುನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಚೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜೂ. 26ರಂದು ಬೆಳಕಿಗೆ ಬಂದಿದೆ.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಚೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಂಶುಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬಂದಿಗಳು ಎಂದಿನಂತೆ ಜೂ. 26ರಂದು ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆಯ ಕುರಿತು ಕಾಲೇಜಿನ ಪ್ರಾಂಶುಪಾಲೆ ಅಕ್ಷತಾ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.