HomePage_Banner
HomePage_Banner
HomePage_Banner

ಆಲಂಕಾರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 6ನೇ ಶಾಖೆ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
  • ಸ್ವಾರ್ಥ ರಹಿತ ಸೇವೆ, ಚಿಂತನೆ ಇದ್ದಾಗ ಮಾತ್ರ ಸಹಕಾರ ಸಂಘ ಬೆಳೆಯಲು ಸಾಧ್ಯ: ಶ್ರೀ ಧರ್ಮಪಾಲ ನಾಥ ಸ್ವಾಮೀಜಿ
  • ಟೌನ್ ಕೋ ಆಪರೇಟಿವ್ ಸೊಸೈಟಿಗಳು ಮಾತ್ರ ಆರ್‌ಬಿಐ ವ್ಯಾಪ್ತಿಗೆ: ಮಠಂದೂರು

ಕಡಬ: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ 2002ರಲ್ಲಿ ಪುತ್ತೂರಿನಲ್ಲಿ ಆರಂಭಗೊಂಡ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ೬ನೇ ಶಾಖೆ ಆಲಂಕಾರು ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಜೂ.27ರಂದು ಉದ್ಘಾಟನೆಗೊಂಡಿತು.

 

ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಶಾಖೆ ಉದ್ಘಾಟಿಸಿದರು. ಬಳಿಕ ಆಲಂಕಾರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸರಳ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಸ್ವಾರ್ಥ ರಹಿತ ಸೇವೆ, ಚಿಂತನೆ ಇದ್ದಾಗ ಮಾತ್ರ ಸಹಕಾರ ಸಂಘ ಬೆಳೆಯಲು ಸಾಧ್ಯವಿದೆ. ಸಂಘದ ಬಗ್ಗೆ ಜನರಲ್ಲಿ ವಿಶ್ವಾಸ, ನಂಬಿಕೆ ಮೂಡಿಸುವುದು ಸಾಮಾನ್ಯದ ಕೆಲಸವಲ್ಲ, 18 ವರ್ಷಗಳ ಹಿಂದೆ ಆರಂಭಗೊಂಡ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬಗ್ಗೆ ಜನರಲ್ಲಿ ವಿಶ್ವಾಸ, ನಂಬಿಕೆ ಹುಟ್ಟಿಕೊಂಡಿದೆ. ಇದರಿಂದಾಗಿಯೇ 6 ಶಾಖೆ ಆರಂಭಗೊಳಿಸಲು ಸಾಧ್ಯವಾಯಿತು ಎಂದು ನುಡಿದರು.

ಮುಖ್ಯ ಅತಿಥಿಯಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಮಾತನಾಡಿ, ನಗರ ಪ್ರದೇಶ ಕೇಂದ್ರಿಕೃತವಾಗಿಟ್ಟುಕೊಂಡು ಹೆಚ್ಚಿನ ಸಾಲ ವಿತರಣೆ, ಠೇವಣಿ ಸಂಗ್ರಹಿಸುತ್ತಿರುವ ಟೌನ್ ಕೋ ಆಪರೇಟಿವ್ ಸೊಸೈಟಿಗಳನ್ನು ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಆರ್‌ಬಿಐ ವ್ಯಾಪ್ತಿಗೆ ತರಲು ಕೇಂದ್ರ ಸರಕಾರ ಮುಂದಾಗಿದೆ. ಉಳಿದ ಎಲ್ಲಾ ಸಹಕಾರ ಸಂಘಗಳು ಈ ಹಿಂದಿನಂತೆಯೇ ಕರ್ನಾಟಕ ಸಹಕಾರಿ ಕಾಯ್ದೆ, ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯಡಿಯಲ್ಲಿಯೇ ಬರಲಿದೆ. ದ.ಕ.ಜಿಲ್ಲೆಯಲ್ಲಿರುವ ಸಹಕಾರ ಸಂಘಗಳು ರಾಜ್ಯ, ದೇಶಕ್ಕೆ ಮಾದರಿಯಾಗಿವೆ ಎಂದರು. ಕೋವಿಡ್ ೧೯ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯ, ಹೊರ ರಾಜ್ಯದಿಂದ ತವರೂರಿಗೆ ಆಗಮಿಸಿರುವ ಸಾವಿರಾರು ಮಂದಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಊರಿನ ಉದ್ಯಮಿಗಳ ಜೊತೆ ಹುಟ್ಟೂರಿನಲ್ಲಿ ಉದ್ಯಮ ಆರಂಭಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದು ಬಹಳಷ್ಟು ಮಂದಿ ಮುಂದೆ ಬಂದಿದ್ದಾರೆ ಎಂದು ಮಠಂದೂರು ಹೇಳಿದರು.

ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿಯವರು ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಹೆಚ್.ಡಿ.ಶಿವರಾಮ್‌ರವರು ಶುಭಹಾರೈಸಿದರು. ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರುಗಳಾದ ರಾಮಕೃಷ್ಣ ಗೌಡ ಕರ್ಮಲ, ಶಿವರಾಮ ಗೌಡ ಇಡ್ಯಪೆ, ನಾಗೇಶ್ ನಳಿಯಾರು, ವೆಂಕಟ್ರಮಣ ಗೌಡ ಕರೆಂಕಿ, ಜಿನ್ನಪ್ಪ ಗೌಡ ಮುಳುವೇಳು, ಮಂಜುನಾಥ ಎನ್.ಎಸ್., ನೇತ್ರಾವತಿ ಕೆ.ಪಿ.ಗೌಡ, ರೇಖಾ ರಾಘವ ಗೌಡ, ಗೌರವ ಸಲಹೆಗಾರ ಈಶ್ವರ ಗೌಡ ಪಜ್ಜಡ್ಕ, ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಹಿರಿಯ ಸಮಿತಿ ಅಧ್ಯಕ್ಷ ನಾಗಪ್ಪ ಗೌಡ ಮರುವಂತಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಚಕ್ರಪಾಣಿ ಬಾಕಿಲ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ.,ವಂದಿಸಿದರು. ಪ್ರದೀಪ್ ಬಾಕಿಲ ಕಾರ್ಯಕ್ರಮ ನಿರೂಪಿಸಿದರು. ಶಾಸಕ ಸಂಜೀವ ಮಠಂದೂರುರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಾಮಣ್ಣ ಗೌಡರವರು ಶಾಸಕರ ಪರಿಚಯ ಮಾಡಿದರು.

ಬೆಳಿಗ್ಗೆ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ಲಕ್ಷ್ಮೀ ಪೂಜೆ ನಡೆಯಿತು. ಜಿ.ಪಂ.ಸದಸ್ಯರಾದ ಸರ್ವೋತ್ತಮ ಗೌಡ, ಪ್ರಮೀಳಾ ಜನಾರ್ದನ, ಆಶಾತಿಮ್ಮಪ್ಪ ಗೌಡ, ತಾ.ಪಂ.ಸದಸ್ಯರಾದ ಗಣೇಶ್ ಕೈಕುರೆ, ತಾರಾ ತಿಮ್ಮಪ್ಪ ಪೂಜಾರಿ, ತೇಜಸ್ವಿನಿಶೇಖರ ಗೌಡ ಕಟ್ಟಪುಣಿ, ಜಯಂತಿ ಆರ್.ಗೌಡ, ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಆಲಂಕಾರು, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ರೈ ಮನವಳಿಕೆ, ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುಗುಣ ಬಾರ್ಕುಳಿ, ಪಿಡಿಒ ಜಗನ್ನಾಥ ಶೆಟ್ಟಿ, ಪುತ್ತೂರು ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಪೂವಪ್ಪ ನಾಯ್ಕ್ ಶಾಂತಿಗುರಿ, ವಿಶ್ರಾಂತ ಪ್ರಾಂಶುಪಾಲ ವಿಠಲ ರೈ ಕೊಣಾಲುಗುತ್ತು, ಉದ್ಯಮಿಗಳಾದ ಗೋಪಾಲಕೃಷ್ಣ ಭಟ್ ಬಚ್ಚಿನಡ್ಕ, ಪೀರ್ ಮಹಮ್ಮದ್ ಆಲಂಕಾರು, ಸುಲೈಮಾನ್ ಸೇರಿದಂತೆ ಹಲವು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.