Home_Page_Advt
Home_Page_Advt
Home_Page_Advt

ಪೆಟ್ರೋಲ್, ಡಿಸೇಲ್ ದರ ಹೆಚ್ಚಳ | ಜೂ. 29ರಂದು ಕಡಬದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

ಕಡಬ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಸಿ ಅಚ್ಚೇದಿನ್ ಕೊರೊನಾ ಸಂಕಷ್ಟ ಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲೂಟಿ ಹೊಡೆಯುತ್ತಿವೆ. ಈ ಜನ ವಿರೋಧಿ ಆಡಳಿತದ ವಿರುದ್ಧ ಕಡಬ ಕಾಂಗ್ರೆಸ್ ನೇತೃತ್ವದಲ್ಲಿ ಜೂ. 29ರಂದು ಕಡಬ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಜಿ.ಪಂ.ಕ್ಷೇತ್ರದ ಸದಸ್ಯ ಪಿ.ಪಿ.ವರ್ಗೀಸ್ ಅವರು ತಿಳಿಸಿದ್ದಾರೆ.


ಅವರು ಶನಿವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ತೈಲ ಬೆಲೆ ಏರಿಕೆಯನ್ನು ಖಂಡಿಸಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ತುಟಿ ಬಿಚ್ಚುತ್ತಿಲ್ಲ. ರಾಜ್ಯದ ಮುಖ್ಯ ಮಂತ್ರಿಯವರು ನಿಷ್ಟ್ಕ್ರಿಯರಾಗಿದ್ದಾರೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿದಿದ್ದು, ದೇಶಾದ್ಯಂತ ಪೆಟ್ರೋಲ್, ಡಿಸೇಲ್ ಬೆಲೆ ವಿಪರೀತ ಗಗನ್ನಕ್ಕೇರಿದೆ. ಬಡ ಸಾಮಾನ್ಯ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಅಚ್ಚೇದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಅನೈತಿಕತೆಯಿಂದ ಹುಟ್ಟಿದ ರಾಜ್ಯ ಸರಕಾರ ಇಂತಹ ಸಂಕಷ್ಟದ ಸಮಯದಲ್ಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರಿಂದ ಹಣ ಲೂಟಿ ಹೊಡೆಯುತ್ತಿದೆ. ಆರ್ಥಿಕವಾಗಿ ಜನ ಜೀವನ ವ್ಯವಸ್ಥೆ ಕುಸಿತಗೊಂಡಿದೆ. ಹಿಂದಿನ ಯುಪಿಯ ಸರಕಾರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದ್ದರೂ ಅದನ್ನು ಸರಿದೂಗಿಸುವ ಕೆಲಸ ಆಗಿದೆ. ಆದರೆ ಆಗ ಬೊಬ್ಬೆ ಹೊಡೆದ ದೇಶ ಭಕ್ತರು ಎಂದು ಕರೆಸಿಕೊಳ್ಳುವ ಬಿಜೆಪಿ ನಾಯಕರು ಈಗ ಎಲ್ಲಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ ಅವರು ಮಾತನಾಡಿ ಕೇವಲ 30 ರೂ. ಪೆಟ್ರೋಲ್ ನೀಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರಕಾರಕ್ಕೆ ಇಂದು ದೆಹಲಿಯಲ್ಲಿ ಪೆಟ್ರೋಲ್‌ಗಿಂತ ಡಿಸೇಲ್ ಬೆಲೆ ಹೆಚ್ಚಾಗಿದ್ದು ಗೊತ್ತಾಗುತ್ತಿಲ್ಲ. ದೇಶದಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರ ನೇತೃತ್ವದಲ್ಲಿ ಕೋಮು ಸಂಘರ್ಷ ಹುಟ್ಟುಹಾಕಿ ಮನುಷ್ಯರ ನಡುವೆ ಕಂದಕ ನಿರ್ಮಿಸಿ ಯಾವುದೇ ಅಭಿವೃದ್ಧಿ ಕಾರ‍್ಯ ನಡೆಸದೆ ಭಾವನಾತ್ಮಕವಾಗಿ ಲಾಭ ಪಡೆಯಲು ಹವಣಿಸುತ್ತಿರುವುದನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯಲು ಸಾಧ್ಯವಾಗದೆ, ಬಡವರಿಗಾಗಿ ಯಾವುದೇ ಶೈಕ್ಷಣಿಕ, ಆರ್ಥಿಕ, ಕೃಷಿ, ನೀತಿ ವ್ಯವಸ್ಥೆಯನ್ನು ಬಲಪಡಿಸಸಲು ಮುಂದಾಗದೇ ಆಡಳಿತದಲ್ಲಿ ನಿಷ್ಕ್ರಿಯಗೊಂಡ ರಾಜ್ಯ ಸರಕಾರ ರಾಜ್ಯದ ಬಡ ಮಧ್ಯಮ ವರ್ಗದ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ದೇಶದ ಆರ್ಥಿಕ ಪರಿಸ್ಥಿತಿ ಕುಲಗೆಟ್ಟು ಹೋಗಿದೆ. ಗಡಿಯಲ್ಲಿ ಸೈನಿಕರನ್ನು ಸಾಯಿಸಲಾಗುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ನ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಜು. ೨ ರಂದು ನಡೆಯಲಿದ್ದು, ಆ ದಿನ ಕಡಬ ತಾಲೂಕಿನ ೯ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ತಾಲೂಕು ಕೇಂದ್ರವಾದ ಕಡಬದಲ್ಲಿ ವಿಶಿಷ್ಟವಾಗಿ ಕಾರ್ಯಕ್ರಮ ನಡೆಸಲು ಸಿದ್ದತೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಕಾಂಗ್ರೆಸ್ ಮುಖಂಡರಾದ ಸೈಮನ್ ಸಿ.ಜೆ., ಕೆ.ಎಂ.ಹನೀಫ್, ಅಶ್ರಫ್ ಶೇಡಿಗುಂಡಿ, ನೀಲಾವತಿ ಶಿವರಾಮ್, ಸುಧೀರ್ ದೇವಾಡಿಗ, ಮಹಮ್ಮದ್ ಫೈಝಲ್ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.