HomePage_Banner
HomePage_Banner
HomePage_Banner

ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾಕ್ಕೆ 57 ವರ್ಷದ ಮಹಿಳೆ ಹಾಗೂ 31 ವರ್ಷದ ಯುವಕ ಸೇರಿದಂತೆ ಎರಡು ಬಲಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನ ಪಾಸಿಟಿವ್ ಗೆ ತುತ್ತಾಗಿದ್ದ ಬಂಟ್ವಾಳ ತಾಲೂಕಿನ ನಿವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದೀಗ ಬಂಟ್ವಾಳದಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಒಂದು ತಿಂಗಳಿನಿಂದ ಬಂಟ್ವಾಳದಲ್ಲಿ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಇದರಿಂದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಇದರ ಮಧ್ಯೆ ಶನಿವಾರ ತಾಲೂಕಿನ ಮೂರು ಗ್ರಾಮಗಳಲ್ಲಿ ತಲಾ ಒಂದರಂತೆ ಮೂರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಇದೀಗ ಜೂ.27ರಂದು ಪತ್ತೆಯಾಗಿರುವ ಲೊರೊಟ್ಟೋ ಪ್ರಕರಣದಲ್ಲಿ ಟಿಪ್ಪು ನಗರ ನಿವಾಸಿ 57 ವರ್ಷದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ಸಾವಿಗೀಡಾಗಿರುವುದು ತಾಲೂಕನ್ನು ಆತಂಕಕ್ಕೆ ತಳ್ಳಿದೆ. ಮೃತಮಹಿಳೆ ಮಧುಮೇಹ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದೀಗ ಕೊರೋನಾ ಅವರನ್ನು ಬಲಿತೆಗೆದುಕೊಂಡಿದೆ. ಮೃತರ ಅಂತ್ಯಸಂಸ್ಕಾರಕ್ಕೆ ತಾಲೂಕು ಆಡಳಿತ ಸಿದ್ಧತೆ ನಡೆಸುತ್ತಿದೆ.

ಇನ್ನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುರತ್ಕಲ್ ಇಡ್ಯಾದ ನಿವಾಸಿಯಾಗಿರುವ 31 ವರ್ಷದ ಯುವಕ ಕೂಡ ಬಲಿಯಾಗಿದ್ದಾನೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. 31 ವರ್ಷದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿರುವುದು ಆತಂಕವನ್ನು ಮೂಡಿಸಿದೆ. 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.