Home_Page_Advt
Home_Page_Advt
Home_Page_Advt

ಉಪ್ಪಿನಂಗಡಿ ರೈತ ಸಂಪರ್ಕ ಕೇಂದ್ರ ಶಿಲಾನ್ಯಾಸ | ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 3 ರೈತ ಸಂಪರ್ಕ ಕೇಂದ್ರ ಮಂಜೂರು-ಮಠಂದೂರು

Puttur_Advt_NewsUnder_1
Puttur_Advt_NewsUnder_1
  • ತಲಾ 50 ಲಕ್ಷ ರೂಪಾಯಿ ಅನುದಾನದಲ್ಲಿ ಕಟ್ಟಡ

ಉಪ್ಪಿನಂಗಡಿ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೩ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು ೪ ರೈತ ಸಂಪರ್ಕ ಕೇಂದ್ರ ಮಂಜೂರು ಆಗಿದ್ದು, ಪ್ರತಿಯೊಂದು ರೈತ ಸಂಪರ್ಕ ಕೇಂದ್ರಗಳಿಗೆ ತಲಾ ೫೦ ಲಕ್ಷ ರೂಪಾಯಿಯಂತೆ ಒಟ್ಟು ೪ ಕೇಂದ್ರಗಳಿಗೆ ೨ ಕೋಟಿ ರೂಪಾಯಿ ಅನುದಾನ ಮಂಜೂರು ಆಗಿರುವುದಾಗಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಜೂ. ೨೯ರಂದು ಉಪ್ಪಿನಂಗಡಿ ಪಶು ಸಂಗೋಪನಾ ಇಲಾಖೆಯ ಪಶು ಚಿಕಿತ್ಸಾ ಕೇಂದ್ರದ ಸನಿಹದಲ್ಲಿ ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಮಂಜೂರು ಆಗಿರುವ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.


ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಪ್ಪಿನಂಗಡಿ, ಪುತ್ತೂರು, ವಿಟ್ಲಕ್ಕೆ ಮಂಜೂರು ಆಗಿರುತ್ತದೆ. ಇನ್ನೊಂದು ದ.ಕ. ಜಿಲ್ಲೆಯ ಮೂಲ್ಕಿಗೆ ಮಂಜೂರು ಆಗಿರುತ್ತದೆ. ಹೀಗೆ ಒಟ್ಟು ಜಿಲ್ಲೆಯ ೪ ಕೇಂದ್ರಗಳಿಗೆ ೨ ಕೋಟಿ ರೂಪಾಯಿ ಅನುದಾನ ಮಂಜೂರು ಆಗಿರುವುದಾಗಿ ಅವರು ತಿಳಿಸಿದರು.
ಉಪ್ಪಿನಂಗಡಿಯಲ್ಲಿ ಕಟ್ಟಡ ನಿರ್ಮಾಣವಾಗುವ ಜಾಗ ಸಮತಟ್ಟು ಇಲ್ಲದ ಸಲುವಾಗಿ ಅದನ್ನು ಸರಿಪಡಿಸುವ ಸಲುವಾಗಿ ಶಾಸಕರ ಪ್ರದೇಶಾಭಿವೃದ್ಧಿಯಿಂದ ೪ ಲಕ್ಷ ಅನುದಾನ ಇಡಲಾಗುವುದು ಎಂದ ಅವರು ನೂತನ ಕಟ್ಟಡ ಕಾಮಗಾರಿ ೮ ತಿಂಗಳ ಒಳಗಾಗಿ ಪೂರ್ಣವಾಗಲಿದೆ ಎಂದರು. ಪುತ್ತೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದ್ದು, ಸಾರ್ವಜನಿಕರು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಮತಿ ಶಯನಾ ಜಯಾನಂದ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಜಾತ ಕೃಷ್ಣ ಆಚಾರ್ಯ, ಮುಕುಂದ ಗೌಡ ಬಜತ್ತೂರು, ಕೃಷಿ ಇಲಾಖೆಯ ಉಪ ನಿರ್ದೇಶಕ ಶಿವಶಂಕರ್ ದಾನೆಗೊಂಡರ್, ಕರ್ನಾಟಕ ರೂರಲ್ ಡೆವಲಪ್‌ಮೆಂಟ್ ಇನ್ಸ್ಟ್ರಾಸ್ಟಕ್ಚರ್ ಸಹಾಯಕ ಕಾರ‍್ಯಪಾಲಕ ಇಂಜಿನಿಯರ್ ರಮೇಶ್ ಶೆಟ್ಟಿ, ಜೂನಿಯರ್ ಇಂಜಿನಿಯರ್ ದೀಕ್ಷಿತ್, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರಾಮಪ್ರಕಾಶ್, ಕಂದಾಯ ನಿರೀಕ್ಷಕ ವಿಜಯವಿಕ್ರಂ, ಗ್ರಾಮಕರಣಿಕ ಸುನಿಲ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುರೇಶ್ ಅತ್ರಮಜಲು, ಸುನಿಲ್ ಕುಮಾರ್ ದಡ್ಡು, ಗೋಪಾಲ ಹೆಗ್ಡೆ, ಯು.ಟಿ. ತೌಶೀಫ್, ಚಂದ್ರಶೇಖರ ಮಡಿವಾಳ, ರಮೇಶ್ ಬಂಡಾರಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಉಮೇಶ್ ಶೆಣೈ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಸ್ಥಳೀಯರಾದ ಕೈಲಾರ್ ರಾಜ್‌ಗೋಪಾಲ ಭಟ್, ಜಗದೀಶ್ ಶೆಟ್ಟಿ, ಜಯಂತ ಪೊರೋಳಿ,
ಶ್ರೀಮತಿ ಉಷಾ ಮುಳಿಯ, ಯತೀಶ್ ಶೆಟ್ಟಿ, ಕಟ್ಟಡ ಕಾಮಗಾರಿ ಗುತ್ತಿಗೆದಾರ ರಾಜೇಂದ್ರಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಂದನ ಶೆಣೈ ಸ್ವಾಗತಿಸಿ, ಕೃಷಿ ಸಹಾಯಕ ಭರಮಣ್ಣವರ್ ವಂದಿಸಿದರು. ತಾಂತ್ರಿಕ ಅಧಿಕಾರಿ ಯಶಸ್ ಕಾರ‍್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.