Home_Page_Advt
Home_Page_Advt
Home_Page_Advt

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಯಾತ್ರಿ ನಿವಾಸ ನಿರ್ಮಾಣಕ್ಕೆ ರೂ. 27 ಲಕ್ಷ ಮಂಜೂರು

Puttur_Advt_NewsUnder_1
Puttur_Advt_NewsUnder_1
  • ಶಾಸಕರಿಂದ ಕಟ್ಟಡ ನಿರ್ಮಾಣಕ್ಕೆ ಜಾಗ ಪರಿಶೀಲನೆ

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಯಾತ್ರಿ ನಿವಾಸ ಕಟ್ಟಡ ನಿರ್ಮಾಣಕ್ಕಾಗಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ೨೭ ಲಕ್ಷ ರೂಪಾಯಿ ಅನುದಾನ ಮಂಜೂರು ಆಗಿದ್ದು, ಇದರ ಕಟ್ಟಡ ನಿರ್ಮಾಣ ಸಲುವಾಗಿ ಜಾಗ ಪರಿಶೀಲನೆ ನಡೆಸಲಾಯಿತು.
ಶಾಸಕ ಸಂಜೀವ ಮಠಂದೂರುರವರು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ದೇವಸ್ಥಾನದ ಆವರಣದ ಸುತ್ತ ಯೋಗ್ಯ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು ಪ್ರವಾಸಿ ಭಕ್ತಾಧಿಗಳ ಅನುಕೂಲತೆಗಾಗಿ ವಸತಿ ವ್ಯವಸ್ಥೆಯನ್ನು ಒಳಗೊಂಡಂತೆ ಯಾತ್ರಿ ನಿವಾಸ ನಿರ್ಮಾಣದ ಯೋಜನೆ ಇದಾಗಿರುತ್ತದೆ, ಮುಂದಿನ ದಿನಗಳಲ್ಲಿ ಶಿಲಾನ್ಯಾಸ ನೆರವೇರಿಸಲಾಗಿ ಕಾಮಗಾರಿ ನಡೆಯಲಿದೆ ಎಂದರು.

 

ಪುತ್ತೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಮತಿ ಶಯನಾ ಜಯಾನಂದ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಜಾತ ಕೃಷ್ಣ ಆಚಾರ್ಯ, ಮುಕುಂದ ಗೌಡ ಬಜತ್ತೂರು, ಕರ್ನಾಟಕ ರೂರಲ್ ಡೆವಲಪ್‌ಮೆಂಟ್ ಇನ್ಸ್ಟ್ರಾಸ್ಟಕ್ಚರ್ ಸಹಾಯಕ ಕಾರ‍್ಯಪಾಲಕ ಇಂಜಿನಿಯರ್ ರಮೇಶ್ ಶೆಟ್ಟಿ, ಜೂನಿಯರ್ ಇಂಜಿನಿಯರ್ ದೀಕ್ಷಿತ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುರೇಶ್ ಅತ್ರಮಜಲು, ಸುನಿಲ್ ಕುಮಾರ್ ದಡ್ಡು, ಗೋಪಾಲ ಹೆಗ್ಡೆ, ಚಂದ್ರಶೇಖರ ಮಡಿವಾಳ, ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಉಮೇಶ್ ಶೆಣೈ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ ಕಂಗ್ವೆ, ಸ್ಥಳೀಯರಾದ ಇಂಜಿನಿಯರ್ ಸುಧಾಕರ ಶೆಟ್ಟಿ, ಹರಿರಾಮಚಂದ್ರ, ಕೈಲಾರ್ ರಾಜ್‌ಗೋಪಾಲ ಭಟ್, ಜಗದೀಶ್ ಶೆಟ್ಟಿ, ಜಯಂತ ಪೊರೋಳಿ, ಶ್ರೀಮತಿ ಉಷಾ ಮುಳಿಯ, ಯತೀಶ್ ಶೆಟ್ಟಿ, ಕಟ್ಟಡ ಕಾಮಗಾರಿ ಗುತ್ತಿಗೆದಾರ ರಾಜೇಂದ್ರಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.