HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಸಂಪ್ಯಾಡಿ, ಕಾರ್ಯದರ್ಶಿ ಕೇಶವ, ಕೋಶಾಧಿಕಾರಿ ರಾಜೇಶ್ .ಬಿ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಪ್ರತಿಷ್ಟಿತ ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಸಂಪ್ಯಾಡಿ, ಕಾರ್ಯದರ್ಶಿಯಾಗಿ ಕೇಶವ, ಕೋಶದಿಕಾರಿಯಾಗಿ ರಾಜೇಶ್.ಬಿ ಯವರು ಆಯ್ಕೆಯಾಗಿದ್ದಾರೆ.

ರಾಜೇಶ್ ಶೆಟ್ಟಿ ಸಂಪ್ಯಾಡಿಯವರು ಕಡಬ ತಾಲೂಕಿನ ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿಯಾಗಿದ್ದು ರಾಮಕುಂಜ ಸಂಪ್ಯಾಡಿ ಶ್ರೀರಾಮ ಆಶ್ವಥ ಕಟ್ಟೆ ಪೂಜಾಸಮಿತಿಯ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಉಪ್ಪಿನಂಗಡಿಯಲ್ಲಿ ರಾಜೇಶ್ ಇಲೆಕ್ಟ್ರಿಕಲ್ಸ್ ಮತ್ತು ಪಿ.ಡಬ್ಲು.ಡಿ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕೇಶವ ರವರು ಪುತ್ತೂರಿನ ಸಾಲ್ಮರದ ಶ್ರೀರಾಮನಗರದ ನಿವಾಸಿಯಾಗಿದ್ದು ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಶಾಖಾಧಿಕಾರಿಯಾಗಿ, ಶಾರದಾಂಬಾ ವಿವಿದೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಶಾರದಾಂಭ ಸೇವ ಸಮಾಜ ಸುಧಾರಣ ಸಂಘದ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜೇಶ್ ಬಿ.ಯವರು ಕಾಸರಗೋಡ್ ತಾಲೂಕಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ನಿವಾಸಿಯಾಗಿದ್ದು ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿದ್ದು ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿ ಭವ ಇಲೆಕ್ಟ್ರಿಕಲ್ಸ್ ಮಾಲಕರಾಗಿ ತನ್ನ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಜೂ.30ರಂದು ಪುತ್ತೂರು ಲಯನ್ಸ್ ಕ್ಲಬ್‌ನಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಪದಗ್ರಹಣ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.