Home_Page_Advt
Home_Page_Advt
Home_Page_Advt

ವಿಟ್ಲ ಹೋಬಳಿ ವ್ಯಾಪ್ತಿಯ 12 ಗ್ರಾಮಗಳ ಜನರಿಗೆ ಶಾಸಕರಿಂದ ಹಕ್ಕುಪತ್ರ ವಿತರಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ವಿಟ್ಲ ಹೋಬಳಿಯ 12 ಗ್ರಾಮದ ಗ್ರಾಮಸ್ಥರಿಗೆ ಹಕ್ಕುಪತ್ರ ಹಾಗೂ ಪರಿಹಾರಧನ ಚೆಕ್‌ಗಳ ವಿತರಣಾ ಸಮಾರಂಭ ಪಡಿಬಾಗಿಲು ಸರಕಾರಿ ಶಾಲೆಯಲ್ಲಿ ನಡೆಯಿತು.

ವಿಟ್ಲ ಹೋಬಳಿಯ 8 ಗ್ರಾಮದ 41 ಮಂದಿಗೆ 94ಸಿ, 94ಸಿಸಿ ಹಕ್ಕು ಪತ್ರ, ಹಾಗೂ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ಗಳನ್ನು ವಿತರಿಸಲಾಯಿತು. ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಮಾತನಾಡಿ ಮಳೆಗಾಲದಲ್ಲಿ ಕೆಲಸ ಕಾರ್ಯಗಳಿಗೆ ವೇಗ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹಕ್ಕು ಪತ್ರ ನೀಡಲಾಗುತ್ತಿದೆ. ಪ್ರಾಕೃತಿಕ ವಿಕೋಪದಿಂದನಷ್ಟ ಉಂಟಾದವರಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಅದರಂತೆ ಪರಿಹಾರ ಚೆಕ್‌ಗಳನ್ನು ವಿತರಿಸಲಾಗಿದೆ. ಕಡು ಬಡವರಿಗೆ ನಿವೇಶನ ನೀಡಲಾಗುತ್ತಿದೆ. ಜನರಿಗೆ ತೊಂದರೆ ಆಗಬಾರದು ಎಂಬ ನೆಲೆಯಲ್ಲಿ ಕೊರೊನಾದ ನಡುವೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೊಡಂದೂರು, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಂತ ನಾಯ್ಕ, ಕೇಪು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ತಾರಾನಾಥ ಆಳ್ವ, ಉಪತಹಶೀಲ್ದಾರ್ ರವಿಶಂಕರ್, ಹೋಬಳಿ ವ್ಯಾಪ್ತಿಯ ನಾನಾ ಗ್ರಾಮಗಳ ಗ್ರಾಮ ಕರಣಿಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ ಸ್ವಾಗತಿಸಿದರು. ವಿಟ್ಲ ಗ್ರಾಮ ಕರಣಿಕ ಪ್ರಕಾಶ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.