Home_Page_Advt
Home_Page_Advt
Home_Page_Advt

ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಬೇರಿಕೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಪುತ್ತೂರು ವಿದಾನಸಭಾ ಕ್ಷೇತ್ರದ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಬೇರಿಕೆಯವರನ್ನು ಆಯ್ಕೆ ಮಾಡಲಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹಾಗೂ ಕೊಳ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮಹಮ್ಮದ್ ರವರ ಶಿಫಾರಸ್ಸಿನಂತೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟುರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಆಯ್ಕೆ ಪ್ರಕ್ರೀಯೆ ನಡೆದಿದೆ. ಕೃಷ್ಣಪ್ಪ ಪೂಜಾರಿ ಬೇರಿಕೆಯವರ ಹಲವಾರು ವರುಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದು,  ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಭಲವರ್ದನೆಗೆ ಶ್ರಮಿಸಿದ್ದರು. ಮಾಜಿ ವಲಯ ಅಧ್ಯಕ್ಷರಾಗಿದ್ದ ಎಲ್ಯಣ್ಣ ಪೂಜಾರಿಯವರನ್ನು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಿಸಾನ್ ಕಾಂಗ್ರಸ್ ಘಟಕದ ಅಧ್ಯಕ್ಷರಾಗಿ ನೇಮಕಮಾಡಲಾಗಿರುವ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಕೃಷ್ಣಪ್ಪ ಪೂಜಾರಿ ಬೇರಿಕೆಯವರನ್ನು ಆಯ್ಕೆ ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.