Breaking News

ಬೆಟ್ಟಂಪಾಡಿ ಗ್ರಾಮೀಣ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ, ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು; ಬೆಂಗಳೂರಿನ ಕೆಪಿಸಿಸಿಯ ನೂತನ ಕಚೇರಿಯಲ್ಲಿ ಜು.2ರಂದು ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ನೇರಪ್ರಸಾರ ವೀಕ್ಷಣೆಗೆ ಇರ್ದೆ-ಬೆಟ್ಟಂಪಾಡಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಅವಕಾಶ ಕಲ್ಪಿಸಲಾಗಿತ್ತು.

ಜಿಲ್ಲಾ ಕಾಂಗ್ರೆಸ್ ಸದಸ್ಯ ಪೇರಲ್ತಡ್ಕ ನಿವಾಸಿ ಐತ್ತಪ್ಪರವರ ಮನೆ ಆವರಣದಲ್ಲಿ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು ಎಲ್.ಸಿ.ಡಿ ಪ್ರಾಜೆಕ್ಟರ್ ಮೂಲಕ ಬೃಹತ್ ಪರದೆಯ ಮೂಲಕ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.

ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ಮುಖಂಡ ಅರಂತನಡ್ಕ ಬಾಳಪ್ಪ ರೈ ದೀಪಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಗ್ ಯುವಕರು ಹೆಚ್ವಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ಪಕ್ಷವನ್ನು ಬಲವರ್ಧನೆ ಮಾಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಯಾವುದೇ ನಾಚಿಕೆ, ಅಂಜಿಕೆ ಬೇಡ. ದೈರ್ಯ, ಉತ್ಸಾಹದಿಂದ ಸೇರ್ಪಡೆಗೊಂಡು ಪಕ್ಷ ಸಂಘಟನೆಯಲ್ಲಿ‌ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ‌ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಪದಗ್ರಹಣವು ರಾಜ್ಯದಲ್ಲಿ ಒಂದು ಪರ್ವ.  ಇದರಿಂದಾಗಿ ಕಾರ್ಯಕರ್ತರಲ್ಲಿ ಹೊಸ ಹಮ್ಮಸ್ಸು ಮೂಡಿದ್ದು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಗ್ರಾಮೀಣ ಮಟ್ಟದಲ್ಲೂ ಪಕ್ಷದ ಕಾರ್ಯಕರ್ತರು ಬಲೀಷ್ಟಗೊಂಡು ಬೆಟ್ಟಂಪಾಡಿ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಆಡಳಿತ  ಅಧಿಕಾರಕ್ಕೆ‌ ತರುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬೆಟ್ಟಂಪಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಮಾಧವ ಪೂಜಾರಿ ಮಾತನಾಡಿ, ಕಾರ್ಯಕರ್ತರೆಲ್ಲರೂ ಮೂಲಕ ಪಕ್ಷದ ಬಲವರ್ಧನೆ ಸಹಕರಿಸುವಂತೆ ಮನವಿ ಮಾಡಿದರು. ಬೆಟ್ಟಂಪಾಡಿ ಗ್ರಾ.ಪಂ ಸದಸ್ಯ ಮೊಯಿದು ಕುಂಞಿ, ಕೆಪಿಸಿಸಿ‌ ಸದಸ್ಯ ಐತ್ತಪ್ಪ‌ ಪೇರಲ್ತಡ್ಕ, ಬ್ಲಾಕ್ ಕಿಸಾನ್ ಘಟಕದ ಕಾರ್ಯದರ್ಶಿ ನವೀನ್‌ ರೈ ಚೆಲ್ಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ
ಪಕ್ಷದ‌ ಹಿರಿಯ ಮುಖಂಡರಾದ ಅರಂತನಡ್ಕ ಬಾಳಪ್ಪ ರೈಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.  ಕೃಷ್ಣ ಪ್ರಸಾದ್ ಆಳ್ವ ಸ್ವಾಗತಿಸಿದರು. ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸದಾಶಿವ ರೈ ಗುಮ್ಮಟೆಗದ್ದೆ ಕಾರ್ಯಕ್ರಮ ನಿರೂಪಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮನಮೋಹನ್ ರೈ ವಂದಿಸಿದರು. ಸುಮಾರು 60 ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.