ಇರ್ದೆ ಬೆಟ್ಟಂಪಾಡಿ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಡಿ.ಕೆ.ಸಿ ಪದಗ್ರಹಣ ವೀಕ್ಷಣೆ, ಗೌರವಾರ್ಪಣೆ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ಇರ್ದೆ ಬೆಟ್ಟಂಪಾಡಿ ಗ್ರಾಮೀಣ ಕಾಂಗ್ರೆಸ್‌ ಸಮಿತಿಯ ವತಿಯಿಂದ ಇರ್ದೆ ಪೇರಲ್ತಡ್ಕ ಐತ್ತಪ್ಪನವರ ಮನೆಯ ವಠಾರದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಮೊದಲಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರಗತಿಪರ ಕೃಷಿಕ ಅರಂತ್ನಡ್ಕ ಬಾಳಪ್ಪ ರಯವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಅನಿಸಿಕೆ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷದ ಸೇರುವುದು ನಾಚಿಕೆ ಎಂಬ ಕೀಳರಿಮೆ ಬೇಡ.  ನಾಡಿನ ಅಭಿವೃದ್ಧಿಗಾಗಿ ಯುವಕರು ಹೆಚ್ಚು ಕಾಂಗ್ರೆಸ್ ಪಕ್ಷ ಸೇರಿ ಇನ್ನಷ್ಟು ಪಕ್ಷ ಬಲಿಷ್ಠವಾಗಿ ಬೆಳೆಯಲು ಪರಿಶ್ರಮ ಪಡುವಂತೆ ತಿಳಿಸಿದರು.

ಕಾಂಗ್ರೆಸ್ ನ ಯುವ ನಾಯಕ ಕೃಷ್ಣ ಪ್ರಸಾದ್ ಆಳ್ವ ಮಾತನಾಡಿ ರಾಜ್ಯದ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಅಲ್ಲದೆ ಗ್ರಾಮದ ಅಭಿವೃದ್ಧಿಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತಿನಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅದಿಕಾರಕ್ಕೆ ಬರಲು ನಾವೆಲ್ಲಾ ಕೆಲಸ ಮಾಡಬೇಕು ಎಂದು ಹೇಳಿ ಶುಭ ಹಾರೈಸಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಯುವ ಮುಂದಾಳು ನವೀನ ರೈ ಚೆಲ್ಯಡ್ಕ ಶುಭ ಹಾರೈಸಿದರು. ಗ್ರಾಮ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ರೆಂಜ ಮಾತನಾಡಿ ನಾನು ಅಧ್ಯಕ್ಷನಾಗಿ ಉತ್ತಮ ಸಂಘಟನೆ ಮಾಡಿದ ತೃಪ್ತಿ ಇದೆ. ಮುಂದೆಯೂ ಎಲ್ಲರ ಸಹಕಾರದಿಂದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಶುಭ ಹಾರೈಸಿದರು. ಸೇರಿದ ಎಲ್ಲ ಕಾರ್ಯಕರ್ತರು ಪ್ರಮಾಣ ವಚನ      ಬೋದಿಸಲಾಯಿತು. ಕಾರ್ಯಕ್ರಮಕ್ಕೆ ಸಹಕರಿಸಿದ ಇಸ್ಮಾಯಿಲ್, ಅಶ್ರಪ್ ರೋಜಾ ಇವರನ್ನು ಗೌರವಿಸಲಾಯಿತು.ಬೆಟ್ಟಂಪಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಮೊಯಿದುಕುಂಞ ಕೋನಡ್ಕ ಸೇರಿದಂತೆ ಸುಮಾರು 50 ಮಂದಿ ಕಾರ್ಯಕರ್ತರು ಪಾಲ್ಗೊಂಡರು.
ಕೃಷ್ಣ ಪ್ರಸಾದ್ ಆಳ್ವ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮನಮೋಹನ ರೈ ಚೆಲ್ಯಡ್ಕ ವಂದಿಸಿದರು. ಬೆಟ್ಟಂಪಾಡಿ ಸಿ.ಎ ಬ್ಯಾಂಕ್ ನಿರ್ದೇಶಕ ಸದಾಶಿವ ರೈ ಉಪ್ಪಳಿಗೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.