HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭದ ನೇರ ಪ್ರಸಾರ, ಪ್ರತಿಜ್ಞಾ ವಿಧಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಡಿಕೆಶಿ ಸಾರಥ್ಯದಿಂದ ಕಾರ್ಯಕರ್ತರಲ್ಲಿ ನವ ಚೈತನ್ಯ: ಕೆ.ಪಿ.ತೋಮಸ್

ನೆಲ್ಯಾಡಿ: ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರವರ ಬೆಂಗಳೂರಿನಲ್ಲಿ ನಡೆದ ಪದಗ್ರಹಣ ಸಮಾರಂಭದ ನೇರ ಪ್ರಸಾರ ಹಾಗೂ ‘ಪ್ರತಿಜ್ಞಾ’ ವಿಧಿ ಕಾರ್ಯಕ್ರಮ ಜು.೨ರಂದು ನೆಲ್ಯಾಡಿ ಅಲ್ಫೋನ್ಸಾ ಚರ್ಚ್‌ನ ಸಭಾಂಗಣದಲ್ಲಿ ನಡೆಯಿತು.

ಕೆಪಿಸಿಸಿ ಸದಸ್ಯ ಕೆ.ಪಿ.ತೋಮಸ್‌ರವರು ಕಾರ್ಯಕ್ರಮ ಉದ್ಘಾಟಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನವಾಗಿದ್ದು, ಡಿ.ಕೆ.ಶಿವಕುಮಾರ್‌ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಿರುವುದು ಕಾರ್ಯಕರ್ತರಲ್ಲಿ ನವ ಚೈತನ್ಯ ಮೂಡಿಸಿದೆ. ಡಿ.ಕೆ.ಶಿವಕುಮಾರ್‌ರವರು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಪಿಸಿಸಿ ಸಾರಥ್ಯ ವಹಿಸುವ ಮೂಲಕ ಈಗ ರಾಜ್ಯದಲ್ಲಿ ಪಕ್ಷ ಬಲವರ್ಧನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ತಳಮಟ್ಟದಲ್ಲಿ ಅವರ ಕೈ ಬಲಪಡಿಸುವಲ್ಲಿ ನಾವೆಲ್ಲರೂ ಅವರಿಗೆ ಶಕ್ತಿ ತುಂಬಬೇಕಿದೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ನೇಮಕದಿಂದ ಕಾರ್ಯಕರ್ತರಲ್ಲಿ ಧೈರ್ಯ, ಹೊಸ ಹುರುಪು ಮೂಡಿದೆ. ಮುಂಬರುವ ದಿನಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆಯ ತನಕವೂ ಸಂಘಟಿತ ಹೋರಾಟ ಮಾಡಬೇಕಿದೆ. ಪಕ್ಷದ ಅಭ್ಯರ್ಥಿಗಳನ್ನೇ ಗೆಲ್ಲಿಸುವ ಮೂಲಕ ಜನಸಾಮಾನ್ಯರ, ಬಡವರ, ದೀನ ದಲಿತರ, ಅಲ್ಪಸಂಖ್ಯಾತರ, ಪರಿಶಿಷ್ಠ ಜಾತಿ, ಪಂಗಡ ಸೇರಿದಂತೆ ಎಲ್ಲಾ ವರ್ಗದ ಜನರ ಬೆನ್ನೆಲುಬು ಆಗಿರುವ ಕಾಂಗ್ರೆಸ್ ಪಕ್ಷವನ್ನು ಮತ್ತೆ ರಾಜ್ಯ, ದೇಶದಲ್ಲಿ ಅಧಿಕಾರಕ್ಕೆ ತರಬೇಕೆಂದು ಹೇಳಿದರು.

ಕೊರೋನಾ ಮುಕ್ತ ಭಾರತ ಮಾಡಲಿ:
ಮುಖ್ಯ ಅತಿಥಿಯಾಗಿದ್ದ ಕಡಬ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಮಾಜಿ ಅಧ್ಯಕ್ಷ, ನ್ಯಾಯವಾದಿ, ನೋಟರಿ ವಕೀಲರೂ ಆಗಿರುವ ಇಸ್ಮಾಯಿಲ್‌ರವರು ಮಾತನಾಡಿ, ಕಳೆದ ಆರು ವರ್ಷಗಳಿಂದ ‘ಕಾಂಗ್ರೆಸ್ ಮುಕ್ತ ಭಾರತ’ ಮಾಡುವುದಾಗಿ ಹೇಳಿಕೊಂಡೇ ಬರುತ್ತಿರುವ ಬಿಜೆಪಿಗೆ ಇಲ್ಲಿಯ ತನಕವೂ ಇದು ಸಾಧ್ಯವಾಗಿಲ್ಲ. ಬಿಜೆಪಿಯವರು ಮೊದಲು ‘ಕೊರೋನಾ ಮುಕ್ತ ಭಾರತ ‘ ನಿರ್ಮಾಣ ಮಾಡಲಿ ಎಂದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ವೇಳೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಜನಪರ ಕಾರ್ಯಗಳು ಇಂದಿಗೂ ಪ್ರಸ್ತುತವಾಗಿದೆ. ಆದರೆ ಈ ಜನಪರ ಕಾರ್ಯಗಳ ಬಗ್ಗೆ ಪ್ರಚಾರ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ. ನಮ್ಮ ವಿರುದ್ಧದ ಅಪಪ್ರಚಾರದಿಂದ ಪಕ್ಷಕ್ಕೆ ತಾತ್ಕಾಲಿಕವಾಗಿ ಸೋಲಾಗಿದೆ. ಜೊತೆಗೆ ಯುವಕರ ಸಂಘಟನೆಯಲ್ಲೂ ವಿಫಲರಾಗಿದ್ದೇವೆ. ಇದೀಗ ಡಿ.ಕೆ.ಶಿವಕುಮಾರ್ ಪಕ್ಷದ ಸಾರಥ್ಯ ವಹಿಸಿಕೊಂಡಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದರು.

ಕಾಂಗ್ರೆಸ್‌ನದ್ದು ಅಭಿವೃದ್ಧಿ ಮಂತ್ರ:
ಇದೊಂದು ಶುಭದಿನ, ಇಂತಹ ಕಾರ್ಯಕ್ರಮ ಎಂದಿಗೂ ನೆನೆಪಿನಲ್ಲಿಟ್ಟುಕೊಳ್ಳಬೇಕಾಗಿದೆ. ಸರ್ವಧರ್ಮವನ್ನೂ ಪ್ರೀತಿಸುವುದರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ದೇಶದ ಅಭಿವೃದ್ಧಿಯೇ ಮಂತ್ರವಾಗಿದೆ. ಬಡವರ ಹಸಿವು ನೀಗಿಸಿದ ಪಕ್ಷ ಕಾಂಗ್ರೆಸ್ ಆಗಿದೆ. ಎಲ್ಲಾ ನೋವು ಬಿಟ್ಟು ಒಟ್ಟಾಗಿ ಕೆಲಸ ಮಾಡುವ ಮೂಲಕ ರಾಜ್ಯ, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ. ನೆಲ್ಯಾಡಿ ಗ್ರಾಮ ಪಂಚಾಯತ್‌ನಲ್ಲಿ ಇಲ್ಲಿಯ ತನಕವೂ ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸಿದೆ. ಪಕ್ಷದ ಹಿರಿಯ ಮುಖಂಡರ ಹಾಗೂ ಕಾರ್ಯಕರ್ತರ ಶ್ರಮದಿಂದಲೇ ಇದು ಸಾಧ್ಯವಾಗಿದ್ದು ಇದನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎಂದರು.

ಡಿಕೆಶಿ ಯೋಗ್ಯ ವ್ಯಕ್ತಿ:
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ ಸುಕುಮಾರ ಗೌಡ ಪುಚ್ಚೇರಿ ಮಾತನಾಡಿ, ಡಿ.ಕೆ.ಶಿವಕುಮಾರ್‌ರವರು ಜಾತಿ ಪ್ರಾಬಲ್ಯದಿಂದ ಮೇಲೆ ಬಂದವರಲ್ಲ, ಎಲ್ಲಾ ಸಮಾಜಬಾಂಧವರ ಪ್ರೀತಿ,ವಿಶ್ವಾಸದಿಂದಲೇ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕೆಪಿಸಿಸಿ ಸಾರಥ್ಯ ವಹಿಸಲು ಅವರೊಬ್ಬ ಯೋಗ್ಯ ವ್ಯಕ್ತಿಯೂ ಆಗಿದ್ದಾರೆ. ಡಿ.ಕೆ.ಶಿವಕುಮಾರ್‌ರವರನ್ನು ಕಟ್ಟಿಹಾಕಲು ಸಾಕಷ್ಟೂ ಪ್ರಯತ್ನಗಳೂ ನಡೆದರೂ ಸಾಧ್ಯವಾಗಿಲ್ಲ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಿದಲ್ಲಿ ಕಾಂಗ್ರೆಸ್ ದೇಶ, ರಾಜ್ಯದಲ್ಲಿ ಮತ್ತೆ ಪ್ರಜ್ವಲಿಸಲಿದೆ ಎಂದರು.

ಗೌರವಾರ್ಪಣೆ:
ಸಮಾರಂಭಕ್ಕೆ ಸಹಕಾರ ನೀಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸದಸ್ಯ ಎಂ.ಟಿ.ಜೋನ್(ಮೋನ್ಸಿ)ರವರಿಗೆ ಶಾಲು, ಹೂ ನೀಡಿ ಗೌರವಾರ್ಪಣೆ ಮಾಡಲಾಯಿತು. ಕಾಂಗ್ರೆಸ್ ನೆಲ್ಯಾಡಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಗೌರಿಜಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೀನಾ ಗಡಿಯಲ್ಲಿ ಚೀನಾ ಹಾಗೂ ಭಾರತೀಯ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರ ಗೌರವಾರ್ಥ ಸಭೆಯಲ್ಲಿ ೧ ನಿಮಿಷ ಮೌನ ಪ್ರಾರ್ಥನೆ ಮಾಡಲಾಯಿತು.

ಕಾಂಗ್ರೆಸ್ ಜಾಲತಾಣ ನೆಲ್ಯಾಡಿ ಗ್ರಾಮ ಸಮಿತಿ ಸಹ ಸಂಯೋಜಕ ಕೆ.ಪಿ.ಅಬ್ರಹಾಂರವರು ಸಂವಿಧಾನ ಪೀಠಿಕೆ ವಾಚಿಸಿದರು. ಕಾಂಗ್ರೆಸ್ ನೆಲ್ಯಾಡಿ ಗ್ರಾಮ ಸಮಿತಿ ಅಧ್ಯಕ್ಷ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಸ್ವಾಗತಿಸಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣ ನೆಲ್ಯಾಡಿ ಗ್ರಾಮ ಸಮಿತಿ ಸಂಚಾಲಕ ಜೋಸ್ ಕೆ.ಜೆ.,ವಂದಿಸಿದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣ ನೆಲ್ಯಾಡಿ ಗ್ರಾಮ ಸಮಿತಿ ಸಂಯೋಜಕ ಗಂಗಾಧರ ಶೆಟ್ಟಿ ಹೊಸಮನೆ ಕಾರ್‍ಯಕ್ರಮ ನಿರೂಪಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.