HomePage_Banner
HomePage_Banner
HomePage_Banner
HomePage_Banner

ಪುತ್ತೂರು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ವ್ಯಕ್ತಿಗಳಿಬ್ಬರ ಕೋವಿಡ್ ವರದಿ ನೆಗೆಟಿವ್ | ನಿಟ್ಟುಸಿರು ಬಿಟ್ಟ ಸಾರ್ವಜನಿಕರು, ರೋಗಿಗಳು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನ ಎರಡು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ರೋಗಿಗಳಿಗೆ ದೃಢಪಟ್ಟಿದ್ದ ಕೊರೋನಾ ಸೋಂಕು ಪ್ರಕರಣಕ್ಕೆ ಸಂಬಂಧಿಸಿ 2ನೇ ಬಾರಿಯ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಪುತ್ತೂರಿನ ಸಾರ್ವಜನಿಕರು, ರೋಗಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಪುತ್ತೂರಿನ ಎರಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ಧೆ ಮತ್ತು ಬಪ್ಪಳಿಗೆಯ 20 ವರ್ಷದ ಯುವಕನಿಗೆ ಜೂ. 27ರಂದು ಕೊರೋನಾ ದೃಢಪಟ್ಟ ಕುರಿತು ವರದಿ ಬಂದಿತ್ತು. ಅದೇ ದಿನ ಅವರಿಬ್ಬರನ್ನು ಮಂಗಳೂರು ವೆನ್‌ಲಾಕ್ ಕೋವಿಡ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರಿಬ್ಬರು ಗುಣಮುಖ ಹೊಂದಿದ್ದು 2 ಬಾರಿ ಅವರ ಗಂಟಲ ದ್ರವ ಮಾದರಿಯನ್ನು ಕೊರೋನಾ ಪರೀಕ್ಷೆ ಒಳಪಡಿಸಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿಯವರು ತಿಳಿಸಿದ್ದಾರೆ. ಎರಡು ಆಸ್ಪತ್ರೆಗಳಲ್ಲಿ ಕೊರೋನಾ ದೃಢಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕದ ಸಿಬಂದಿಗಳನ್ನು ಮತ್ತು ವೈದ್ಯರಿಬ್ಬರನ್ನು ಕೊರಂಟೈನ್‌ಗೆ ಒಳಪಡಿಸಲಾಗಿತ್ತು. ಇದೀಗ ರೋಗಿಗಳಿಬ್ಬರಿಗೆ ಕೊರೋನಾ ನೆಗೆಟಿವ್ ವರದಿ ಬಂದಿದ್ದರಿಂದ ಆತಂಕ ದೂರವಾಗಿದೆ.

ಪುತ್ತೂರು ಆಸ್ಪತ್ರೆಗೆ ಹೊರರೋಗಿಯಾಗಿ ಬಂದ ಪುಣಚದ ಮಹಿಳೆಗೆ ಕೊರೋನಾ
ಪುತ್ತೂರು ಖಾಸಗಿ ಆಸ್ಪತ್ರೆಯೊಂದಕ್ಕೆ ಹೊರರೋಗಿಯಾಗಿ ಬಂದು ಮಂಗಳೂರು ಅಸ್ಪತ್ರೆಯಲ್ಲಿ ದಾಖಲಾಗಿದ್ದ ಪುಣಚದ ಮಹಿಳೆಯೊಬ್ಬರಿಗೆ ಕೊರೋನಾ ದೃಢಪಟ್ಟಿರುವ ಕುರಿತು ವರದಿಯಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.