ಕಡಬ:ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ. ಮೃತ ಯುವಕನನ್ನು ಎಡಮಂಗಲ ಗ್ರಾಮದ ದೊಳ್ತಿಲ ನಿವಾಸಿ ಪ್ರಕಾಶ್ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.