ದ.ಕ. ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ.ರತ್ನಾಕರ ಅವರನ್ನು ಪ್ರಭಾರ ವಹಿಸಲು ಜಿ.ಪಂ.ಸಿಇಓ ಆದೇಶಿಸಿದ್ದಾರೆ.

ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ಅವರು ಆರೋಗ್ಯ ಸಂಬಂಧಿ ಸಮಸ್ಯೆಯಿಂದ ರಜೆಯಲ್ಲಿ ತೆರಳಿದ್ದು, ರಜೆಯ ಹಿನ್ನೆಲೆಯಲ್ಲಿ ಅವರು ಮರಳಿ ಕರ್ತವ್ಯಕ್ಕೆ ಹಾಜರಾಗುವವರೆಗೆ ಅಥವಾ ಮುಂದಿನ ಆದೇಶದವರೆಗೆ ಜಿಲ್ಲಾ ಕುಷ್ಡ ರೋಗ ನಿವಾರಣಾಧಿಕಾರಿಯಾದ ಡಾ.ರತ್ನಾಕರ ಅವರನ್ನು ದ.ಕ. ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಪ್ರಭಾರ ವಹಿಸಲು ಜಿ.ಪಂ.ಸಿಇಓ ಡಾ.ಸೆಲ್ವಮಣಿ ಅವರು ಆದೇಶಿದ್ದಾರೆ.