ಪುತ್ತೂರು: ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜು.6ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ.

ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಬ್ಬರಿಗೂ ಕೊರೋನಾ ವೈರಸ್ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಸೋಂಕಿತರ ಸಂಖ್ಯೆ 1234 ಕ್ಕೆ ಏರಿಕೆಯಾಗಿದೆ