ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ತಣ್ಣೀರುಪಂಥ ಗ್ರಾಮದ ಅಳಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಐವನ್ ಡಿ’ಸೋಜಾ ಅವರ ಅನುದಾನದಲ್ಲಿ ನಿರ್ಮಿಸಲಾದ ಅಟೋ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಜುಲೈ 4ರಂದು ಜರಗಿತು.
ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಉದ್ಘಾಟಿಸಿ ಮಾತನಾಡಿ ರಿಕ್ಷಾ ಚಾಲಕರು ಗ್ರಾಮದ ದೈನಿಕ ಆಗುಹೋಗುಗಳ ಕುರಿತು ಅರಿತಿದ್ದು ಬಡ ಶ್ರೀಮಂತ ಸೇರಿದಂತೆ ಎಲ್ಲ ವರ್ಗವನ್ನು ಸಮಾನವಾಗಿ ಕಾಣುವ ಪ್ರಾಮಾಣಿಕ ಸೇವೆಯ ಮೂಲಕ ಜನರಿಗೆ ಹತ್ತಿರವಾಗಿದ್ದಾರೆ, ಇವರ ಸೇವೆಯನ್ನು ಸರಕಾರ ಗುರುತಿಸುವಂತಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಹರೀಶ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಐವನ್ ಡಿ’ಸೋಜಾ ಸಂದರ್ಭೋಚಿತವಾಗಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ಶ್ರೀಮತಿ ಕೇಶವತಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮಾಜಿ ಉಪಾಧ್ಯಕ್ಷ ಕೇಶವ ನಾಯ್ಕ, ಮಾಜಿ ಸದಸ್ಯರಾದ ಸದಾನಂದ ಮಡಪ್ಪಾಡಿ, ಯೋಗಿಶ್ ಆಳಕೆ, ಆದಂ, ಅಬ್ದುಲ್ ರಹಿಮಾನ್, ಅಯೂಬ್,ತಾಜುದ್ದೀನ್, ನವೀನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ಕಾರ್ಯದರ್ಶಿ ಆನಂದ ಇದ್ದರು.