ದಕ್ಷಿಣ ಕನ್ನಡ ಜಿಲ್ಲೆ: ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ದಕ್ಷಿಣ ಕನ್ನಡ ಜಿಲ್ಲೆಯಿಂದ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 66 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸೂಚನೆಗಳು:
1) ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
2) ಅಭ್ಯರ್ಥಿಗಳ ವಯಸ್ಸು 18 ವರ್ಷ ಪೂರ್ಣಗೊಂಡಿರಬೇಕು ಹಾಗೂ 35 ವರ್ಷ ಮೀರಿರಬಾರದು.
3) ಕಾರ್ಯಕರ್ತೆ ಹುದ್ದೆಗೆ ಜನ್ಮದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ. ಸಹಾಯಕಿ ಹುದ್ದೆಗೆ ಜನ್ಮದಿನಾಂಕ ನಮೂದಿಸಿರುವ ಶಿಕ್ಷಣ ಇಲಾಖೆ ನೀಡಿರುವ ಟಿ.ಸಿ (ವರ್ಗಾವಣೆ ಪ್ರಮಾಣ ಪತ್ರ) ಅಥವಾ ಕಂದಾಯ ಇಲಾಖೆ ನೀಡಿರುವ ಜನನ ಪ್ರಮಾಣ ಪತ್ರ.

ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ತೇರ್ಗಡೆ, ಗರಿಷ್ಠ 9ನೇ ತರಗತಿ ತೇರ್ಗಡೆ, ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುವುದು. 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
4) ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿ.
5) ಅಭ್ಯರ್ಥಿಯು ಅದೇ ಗ್ರಾಮದಲ್ಲಿ (ನಗರ ಪ್ರದೇಶವಾಗಿದ್ದಲ್ಲಿ ಅದೇ ವಾರ್ಡಿನಲ್ಲಿ) ವಾಸ್ತವ್ಯವಿರುವ ಬಗ್ಗೆ ತಹಶೀಲ್ದಾರರು/ಉಪ ತಹಶೀಲ್ದಾರರು ಒಂದು ವರ್ಷದೊಳಗೆ ನೀಡಿರುವ ವಾಸಸ್ಥಳ ದೃಢೀಕರಣ ಪತ್ರ.
6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಿದ ಕೇಂದ್ರಗಳಿಗೆ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.

ಖಾಲಿಯಿರುವ ಹುದ್ದೆಗಳ ವಿವರ: ಬೆಳ್ತಂಗಡಿ, ಸುಳ್ಯ, ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಬಂಟ್ವಾಳ, ಪುತ್ತೂರು, ವಿಟ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-07-2020.

ಹೆಚ್ಚಿನ ವಿವರಗಳಿಗಾಗಿ: https://anganwadirecruit.kar.nic.in/

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ಲೈನ್ ಗಾಗಿ ಸಂಪರ್ಕಿಸಿ: ಸುದ್ದಿ ಆನ್‍ಲೈನ್ ವಿಭಾಗ, ದೇವಣ್ಣ ಕಿಣಿ ಬಿಲ್ಡಿಂಗ್, ಕಾರ್ಪೋರೇಷನ್ ಬ್ಯಾಂಕ್ ಬಳಿ, ಮುಖ್ಯರಸ್ತೆ, ಪುತ್ತೂರು. ಫೋ: 08251-238949 | 7829503541

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.