ವಿಟ್ಲ: ಹೆರಿಗೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿಟ್ಲದ ಮಹಿಳೆಯೋರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿಟ್ಲದ ಬೊಬ್ಬೆಕೇರಿಯಲ್ಲಿರುವ ಮಹಿಳೆಯ ಪತಿಯ ಮನೆ ಸೀಲ್ಡೌನ್ ಮಾಡಲಾಗಿದ್ದು, ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಗಾ ವಹಿಸಲಾಗಿದೆ.
ವಿಟ್ಲದ ಬೊಬ್ಬೇಕೆರಿ ನಿವಾಸಿ, ಮಹಿಳೆಯೋರ್ವರು ಕೆಲ ಸಮಯಗಳ ಹಿಂದೆ ದೇರಳಕಟ್ಟೆಯಲ್ಲಿರುವ ತನ್ನ ತಾಯಿಯ ಮನೆಗೆ ತೆರಳಿದ್ದರು. ಬಳಿಕ ಹೆರಿಗೆಗೆಂದು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ವರದಿಯಲ್ಲಿ ಅವರಿಗೆ ಕೊರೋನ ಸೋಂಕು ಇರುವುದು ದೃಡಪಟ್ಟಿತ್ತು. ಈ ನಿಟ್ಟಿನಲ್ಲಿ ವಿಟ್ಲದ ಬೊಬ್ಬೆಕೇರಿಯಲ್ಲಿರುವ ಅವರ ಪತಿಯ ಮನೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಗ್ರಾಮ ಕರಣಿಕ ಪ್ರಕಾಶ್, ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಸಿಲ್ ಡೌನ್ ಮಾಡಲಾಯಿತು. ಅವರ ಮನೆಯ ಸುತ್ತಮುತ್ತ ಇರುವ ಅಂಗಡಿಗಳ ಮೇಲೆ ನಿಗಾ ವಹಿಸಲಾಗಿದೆ.