ಪುತ್ತೂರು: ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ಜು.8ರಂದು ಎರಡು ಕೊರೋನಾ ಪ್ರಕರಣ ದೃಢಪಟ್ಟಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ವರ್ಷದ ಸಿಬಂದಿ ಮತ್ತು ಆಲಂಕಾರು ನಿವಾಸಿ 42 ವರ್ಷದ ಮಹಿಳೆಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.
ಕೆಲವು ದಿನಗಳ ಹಿಂದೆ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.