ಪುತ್ತೂರು: ಭಾರಿ ಮಳೆಯಿಂದಾಗಿ ಚರಂಡಿ ಬ್ಲಾಕ್ ಆಗಿ ಕೃತಕ ನೆರೆ ಕಂಡ ಪರಿಸರಗಳಲ್ಲಿ ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿಯವರು ಸ್ವತಃ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪೌರ ಕಾರ್ಮಿಕರ ಮೂಲಕ ಕಾರ್ಯಾಚರಣೆ ನಡೆಸಿ ಮಳೆ ನೀರು ಸುಲಭವಾಗಿ ಹರಿಯಲು ವ್ಯವಸ್ಥೆ ಮಾಡಿಸಿದ್ದಾರೆ.
ಪುತ್ತೂರು ಎಪಿಎಂಸಿ ಪರಿಸರ ಸೇರಿದಂತೆ ಕೆಲವು ಕಡೆ ಜು.7ರಂದು ಮಳೆ ನೀರಿನ ಕೃತಕ ನೆರೆ ಉಂಟಾಗಿತ್ತು. ನಗರಸಭೆ ಪೌರ ಕಾರ್ಮಿಕರು ಘಟನಾ ಸ್ಥಳಕ್ಕೆ ತೆರಳಿ ಚರಂಡಿಯಲ್ಲಿ ಹೂಳು ತುಂಬಿ ಬ್ಲಾಕ್ ಆಗಿದ್ದ ಮಳೆ ನೀರನ್ನು ಸುಲಭವಾಗಿ ಹರಿಯಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ಇಂಜಿನಿಯರ್ಗಳು ಉಪಸ್ಥಿತರಿದ್ದರು.