ಪುತ್ತೂರು: ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು ಜು.9ರಂದು ಪುತ್ತೂರಿನಲ್ಲಿ ಮತ್ತೆ ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 1 ಮತ್ತು ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ.
ನಗರಸಭಾ ವ್ಯಾಪ್ತಿಯ ಬೊಳುವಾರು ಮಿಷನ್ ಗುಡ್ಡೆ ನಿವಾಸಿ 56 ವರ್ಷದ ಮಹಿಳೆ ಅನಾರೋಗ್ಯದ ಕಾರಣದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಕೊರೋನಾ ದೃಢಪಟ್ಟಿದೆ. ಅದೇ ರೀತಿ ಈಶ್ವರಮಂಗಲ ನಿವಾಸಿ 55 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಜ್ವರದ ಹಿನ್ನೆಲೆಯಲ್ಲಿ ದಾಖಲಾಗಿದ್ದರು. ಇವರ ಗಂಟಲು ದ್ರವ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಕೊರೋನಾ ದೃಢಪಟ್ಟ ಇಬ್ಬರ ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ.