ಕೊರೋನಾ ತಡೆಗಟ್ಟಲು ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ, ಗ್ರಾಮ ಮಟ್ಟದ ಕಾರ್ಯಪಡೆ ರಚಿಸಿ ಸರಕಾರ ಆದೇಶ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್‌ನ್ನು ನಿಯಂತ್ರಿಸಲು ಹಾಗೂ ವೈರಸ್ ಹರಡದಂತೆ ತಡೆಗಟ್ಟಲು ಸರಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕು ಹರಡದಂತೆ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ಮತ್ತು ಗ್ರಾಮ ಮಟ್ಟದ ಕಾರ್ಯಪಡೆ ರಚಿಸಿ ಸರಕಾರ ಆದೇಶಿಸಿದೆ.
ಗ್ರಾಮ ಪಂಚಾಯತಿಗಳ ೫ ವರ್ಷಗಳ ಅವಧಿಯು ಪೂರ್ಣಗೊಂಡಿದ್ದು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿರುವುದರಿಂದ ಪ್ರಸಕ್ತ ಸುತ್ತೋಲೆಯಲ್ಲಿ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ಮತ್ತು ಗ್ರಾಮ ಮಟ್ಟದ ಕಾರ್ಯಪಡೆಯನ್ನು ಪರಿಷ್ಕರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆದೇಶ ನೀಡಿದೆ.

ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ : ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆಯಲ್ಲಿ ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಅಧ್ಯಕ್ಷರಾಗಿರುತ್ತಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಳಿದಂತೆ ಸದಸ್ಯರುಗಳಾಗಿ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರು, ಗ್ರಾಮ ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರು, ಕೇಂದ್ರ ಸ್ಥಾನದ ಗ್ರಾಮ ಲೆಕ್ಕಾಧಿಕಾರಿ/ಕಂದಾಯ ನಿರೀಕ್ಷಕರು (ಹೋಬಳಿ ಕೇಂದ್ರ ಸ್ಥಾನವಾಗಿದ್ದಲ್ಲಿ ಉಪತಹಸೀಲ್ದಾರ್), ಸ್ಥಳೀಯ ಪೊಲೀಸ್ ಠಾಣೆಯ ಎಸ್.ಎಚ್.ಒ ಅಥವಾ ಅವರ ಪ್ರತಿನಿಧಿ, ಸ್ಥಳೀಯ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಥವಾ ಅವರ ಪ್ರತಿನಿಧಿ, ಅಂಗನವಾಡಿ ಮೇಲ್ವಿಚಾರಕರು ಅಥವಾ ಅವರ ಪ್ರತಿನಿಧಿ, ಎ.ಎನ್.ಎಂ/ಆಶಾ ಕಾರ್ಯಕರ್ತೆಯರು, ಸ್ತ್ರಿಶಕ್ತಿ ಸ್ವಸಹಾಯ ಗುಂಪುಗಳ ಪ್ರತಿನಿಧಿ, ಗ್ರಾಮ ಮಟ್ಟದ ಪುನರ್ ವಸತಿ ಕಾರ್ಯಕರ್ತರು, ಸ್ಥಳೀಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸ್ವಯಂಸೇವಕರು ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಸ್ವಯಂ ಸೇವಕರಾಗಲು ಇಚ್ಚಿಸಿದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆಯಲ್ಲಿ ಸ್ವಯಂಸೇವಕರಾಗಿ ಭಾಗವಹಿಸಬಹುದು. ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕಾರ್ಯಪಡೆಯ ಜವಾಬ್ದಾರಿಗಳನ್ನು ನಿರ್ವಹಿಸಲು ಸಹಕರಿಸತಕ್ಕದ್ದು.

ಗ್ರಾಮ ಮಟ್ಟದ ಕಾರ್ಯಪಡೆ : ಗ್ರಾಮ ಮಟ್ಟದ ಕಾರ್ಯಪಡೆಯಲ್ಲಿ ಗ್ರಾಮದ ಮತಗಟ್ಟೆ ಅಧಿಕಾರಿಗಳು ಸಂಚಾಲಕರಾಗಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಯಿಂದ ನಾಮನಿರ್ದೇಶಿತ ಗ್ರಾಮ ಪಂಚಾಯತಿ ಸಿಬ್ಬಂದಿ/ವಿ.ಆರ್.ಪಿ/ಸಿ.ಆರ್.ಪಿ ರವರು ಸಂಯೋಜಕರಾಗಿರುತ್ತಾರೆ. ಉಳಿದಂತೆ ಸದಸ್ಯರುಗಳಾಗಿ ವೈದ್ಯಾಧಿಕಾರಿಗಳು ಅಥವಾ ಅವರ ಪ್ರತಿನಿಧಿ, ಗ್ರಾಮ ಲೆಕ್ಕಿಗರು, ಗ್ರಾಮದ ಎಲ್ಲಾ ಆಶಾಕಾರ್ಯಕರ್ತೆಯರು, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ವಾಟರ್ ಮ್ಯಾನ್, ಕೊರೋನಾ ಸೈನಿಕರು ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.