HomePage_Banner
HomePage_Banner
HomePage_Banner
HomePage_Banner

ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯರಿಗೆ ಆಯುಷ್ ಮಾತ್ರೆ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆಯುರ್ವೇದ ಔಷಧಿ ಪದ್ಧತಿಯ ಆಯುಷ್ ಫೌಂಡೇಶನ್ ಆಫ್ ಇಂಡಿಯಾ ವತಿಯಿಂದ ಮಹಾಮಾರಿ ಕೊರೋನಾ ತಡೆಗಟ್ಟಲು ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಮಾತ್ರೆಗಳನ್ನು ಕೊರೋನಾ ಫ್ರಂಟ್‌ಲೈನ್ ವಾರಿಯರ್ಸ್ ಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದು ಜೂ.10ರಂದು ಆಯುಷ್ ಫೌಂಡೆಶನ್ ಪುತ್ತೂರು ಘಟಕದಿಂದ ಪುತ್ತೂರು ತಾಲೂಕಿನ ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯರಿಗೆ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಯಿತು.

ಆಯುಷ್ ಫೌಂಡೇಶನನ್ ಆಫ್ ಇಂಡಿಯಾದ ಪುತ್ತೂರು ಘಟಕದ ಅಧ್ಯಕ್ಷ ಡಾ.ರವಿಶಂಕರ್ ಪೆರುವಾಜೆ ರವರು ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ರವರಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಡಾ.ರವಿಶಂಕರ್ ಪೆರುವಾಜೆ ಮಾತನಾಡಿ ಈ ಮಾತ್ರೆಗಳನ್ನು ಕೊರೋನಾ ಫ್ರಂಟ್‌ಲೈನ್ ವಾರಿಯರ್ಸ್ ಗೆ ಉಚಿತವಾಗಿ ನೀಡಲಾಗುತ್ತಿದೆ. ಮಾತ್ರೆ ಸೇವನೆಯಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಮಾತ್ರೆಗಳು ಎಲ್ಲಾ ಔಷಧಿ ಮಾರಾಟ ಅಂಗಡಿಗಳಲ್ಲೂ ಲಭ್ಯವಿದೆ. ಇದನ್ನು ಜನರು ಪರಿಣಾಮಕಾರಿಯಾಗಿ ಬಳಸುವಂತೆ ತಿಳಿಸಬೇಕು ಎಂದರು. ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಮಾತನಾಡಿ ಡಾ.ರವಿಶಂಕರ್ ಪೆರುವಾಜೆ ರವರನ್ನು ಅಭಿನಂದಿಸಿದರು. ‌ಸಂಘದ ಕಾರ್ಯದರ್ಶಿ ಶರತ್‌ ಕುಮಾರ್‌ ಪಾರ ವಂದಿಸಿದರು. ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.