HomePage_Banner
HomePage_Banner
HomePage_Banner
HomePage_Banner

ಹೆಚ್ಚುತ್ತಿರುವ ಕೊರೋನಾ ಪ್ರಕರಣ | 1ವಾರ ಬೆಂಗಳೂರು ಲಾಕ್‌ಡೌನ್

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14ರಿಂದ 1ವಾರ ಕಾಲ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ತಜ್ಞರು ಹಾಗೂ ಜನಪ್ರತಿನಿಧಿಗಳ ಆಗ್ರಹದ ಮೇರೆಗೆ ಕೊನೆಗೂ ರಾಜ್ಯ ಸರ್ಕಾರ ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ದಿನೇ ದಿನೇ ಭಾರೀ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು.೧೪ರ ಮಂಗಳವಾರ ರಾತ್ರಿ 8 ಗಂಟೆಯಿಂದ 1ವಾರ ಬೆಳಗ್ಗೆ ಗಂಟೆ 5ರವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ‘ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬರುವ ಮಂಗಳವಾರ, ಜುಲೈ14ರ ರಾತ್ರಿ 8ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗುವುದು. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ ಎಂದು ಟ್ವೀಟ್ ಮಾಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.