HomePage_Banner
HomePage_Banner
HomePage_Banner
HomePage_Banner

ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಬಾಕಿ ಇರುವ ಕೃಷಿ ಸಾಲ ಮನ್ನಾ ಯೋಜನೆಯ ಹಣ ಬಿಡುಗಡೆಗೆ ಮನವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರದ ರೂ.೧ ಲಕ್ಷ ಸಾಲ ಮನ್ನಾ ಯೋಜನೆಯಲ್ಲಿ ೪೩೪ ಫಲಾನುಭವಿಗಳನ್ನು ಗುರುತಿಸಿದ್ದು, ಇದರಲ್ಲಿ ಹಂತ ಹಂತವಾಗಿ ೩೦೪ ಸದಸ್ಯರಿಗೆ ಮನ್ನಾ ಯೋಜನೆಯ ಹಣ ಬಿಡುಗಡೆಯಾಗಿರುತ್ತದೆ.

ಇನ್ನು ಉಳಿಕೆ ೧೩೦ ಜನರಿಗೆ ಸಾಲ ಮನ್ನಾ ಬಿಡುಗಡೆಯಾಗದೆ ಬಾಕಿ ಉಳಿದಿದ್ದು ಒಂದೇ ಕುಟುಂಬದ ಸದಸ್ಯರೆಂದು, ಪಿಂಚಣಿದಾರರೆಂದು, ಆದಾಯ ತೆರಿಗೆ ಪಾವತಿದಾರರೆಂದು ಹಾಗೂ ಬೇರೆ ಬೇರೆ ಕಾರಣಗಳಿಂದಾಗಿ ಇದರಲ್ಲಿ ೪೧ ಫಲಾನುಭವಿಗಳನ್ನು ಕೈ ಬಿಡಲಾಗಿರುತ್ತದೆ. ಸರಕಾರದ ಸಾಲ ಮನ್ನಾ ಯೋಜನೆಯ ಕಠಿಣ ಶರತ್ತಿನಿಂದಾಗಿ ರೈತರು ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುತ್ತಾರೆ. ನಮ್ಮ ಸಹಕಾರಿ ಸಂಘದ ಎಲ್ಲಾ ಅರ್ಹ ರೈತ ಸದಸ್ಯರಿಗೆ ಸಾಲ ಮನ್ನಾ ಯೋಜನೆ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳುವರೇ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರಕುಮಾರ್‌ರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಹೆಚ್.ಮಹಮ್ಮದ್ ಆಲಿಯವರು ಸಹಕಾರ ಸಂಘದ ಅಭಿವೃದ್ದಿಗೆ ಸತತವಾಗಿ ಸಹಕರಿಸಿ ಪ್ರೋತ್ಸಾಹಿಸುತ್ತಾ ಬಂದಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಿಗೆ ಈ ಸಂದರ್ಭದಲ್ಲಿ ಕೃತಜ್ಙತೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕೇಂದ್ರ ಸಹಕಾರಿ ಯೂನಿಯನ್‌ನ ನಿರ್ದೇಶಕರಾದ ರಾಜಶೇಖರ ಜೈನ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.