HomePage_Banner
HomePage_Banner
HomePage_Banner
HomePage_Banner

ಅವಶ್ಯ ಸಿಬ್ಬಂದಿಗಳನ್ನು ಮಾತ್ರ ಪೊಲೀಸ್ ಠಾಣೆಗಳಲ್ಲಿ ನಿಯೋಜಿಸಬೇಕು , ೫೦ ವರ್ಷ ದಾಟಿದ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಮ್-ಗೃಹ ಸಚಿವರ ಸೂಚನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪೊಲೀಸ್ ಠಾಣೆಗಳಲ್ಲಿ ಕೋವಿಡ್-19 ಹರಡುವ ಸ್ಥಳ ಆಗಿರುವುದರಿಂದ ಅವಶ್ಯವಿರುವ ಸಿಬ್ಬಂದಿಗಳನ್ನು ಮಾತ್ರ ಠಾಣೆಗಳಲ್ಲಿ ನಿಯೋಜಿಸಬೇಕು.ಕಾನ್‌ಸ್ಟೆಬಲ್‌ಗಳಿಗೆ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
‘ಆರೋಗ್ಯ ಭಾಗ್ಯ ಯೋಜನೆಯಡಿ ಎಲ್ಲ ಆಸ್ಪತ್ರೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಿ ಎಲ್ಲ ಆಸ್ಪತ್ರೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಚಿಕಿತ್ಸೆ ವ್ಯವಸ್ಥೆ ಮಾಡಬೇಕು’ ಸಾರ್ವಜನಿಕರ ದೂರುಗಳನ್ನು ಆನ್‌ಲೈನ್ ಮೂಲಕ ಸ್ವೀಕರಿಸಿ, ದಾಖಲಾದ ದೂರುಗಳನ್ನು ವಿಚಾರಣೆ ನಡೆಸಬೇಕು.೫೦ ವರ್ಷ ದಾಟಿದ ಸಿಬ್ಬಂದಿಗಳಿಗೆ ಮನೆಯಿಂದ ಕೆಲಸ ಮಾಡಲು(ವರ್ಕ್ ಫ್ರಂ ಹೋಮ್)ಸೂಚಿಸಬೇಕು.ಕರ್ತವ್ಯ ಮುಗಿದ ಬಳಿಕ ಸಿಬ್ಬಂದಿ ಮತ್ತು ಠಾಣೆಯನ್ನು ಸ್ವಚ್ಛಗೊಳಿಸಲು ಅಗತ್ಯ ಹಣಕಾಸು ನೆರವು ನೀಡಬೇಕು. ಠಾಣೆಗಳಲ್ಲಿ ಸ್ವಾಗತಕಾರರ ಸ್ಥಳಗಳಲ್ಲಿ ಗಾಜಿನ ಕ್ಯಾಬಿನ್ ಅಳವಡಿಸಿ ದೂರು ಸ್ವೀಕರಿಸಲು ವ್ಯವಸ್ಥೆ ಮಾಡಬೇಕು ಎಂದು ಗೃಹ ಸಚಿವರು ಹೇಳಿದ್ದಾರೆ.
ಕೋವಿಡ್-19 ಆಸ್ಪತ್ರೆ ಮತ್ತು ಸ್ಮಶಾನಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಮಾಸ್ಕ್, ಹೆಡ್‌ಗ್ಲೆರ್, ಗ್ಲೌಸ್ ಮತ್ತು ಪಿಪಿಇ ಕಿಟ್ ನೀಡಬೇಕು. ಸಿಬ್ಬಂದಿಯ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್, ಆಯುರ್ವೇದಿಕ್ ಔಷಧ ನೀಡುವಂತೆಯೂ ಸೂಚಿಸಬೇಕು ಎಂದು ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.