ಪುತ್ತೂರು: ಪುತ್ತೂರು ಮತ್ತು ಕಡಬ ಉಭಯ ತಾಲೂಕಿನಲ್ಲಿ ಜು.14ರಂದು 3 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ 70 ವರ್ಷ ವಯಸ್ಸಿನ ವೃದ್ಧರೊಬ್ಬರು ಜ್ವರದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟು ಅವರಿಗೆ ಕೊರೋನಾ ದೃಢಪಟ್ಟಿದೆ. ಮಂಗಳೂರು ಜೆಪ್ಪುವಿನಲ್ಲಿ ಮಗನ ಮನೆಯಲ್ಲಿರುವ ಪುತ್ತೂರು ನಗರಸಭಾ ವ್ಯಾಪ್ತಿಯ ಮೊಟೆತ್ತಡ್ಕ ನಿವಾಸಿ 62 ವರ್ಷ ವಯಸ್ಸಿನ ವ್ಯಕ್ತಿಗೆ ಕೊರೋನಾ ದೃಢಪಟ್ಟಿದೆ.
ಅವರು ಜ್ವರದ ಕಾರಣದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಮಹಾರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ 39 ವರ್ಷದ ಯುವಕನಲ್ಲಿ ಕೊರೋನಾ ದೃಢಪಟ್ಟಿದ್ದು, ಅವರ ಸಹದ್ಯೋಗಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕ ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದ್ರವ ಪರೀಕ್ಷೆ ಪಾಸಿಟಿವ್ ಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.