ಅಂಬಿಕಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ (100%)
ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ಕಾಲೇಜಿನಿಂದ 208 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 128 ಮಂದಿ ವಿಶಿಷ್ಠ ಶ್ರೇಣಿ ಹಾಗೂ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ದಾಖಲಿಸಿದೆ.
ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು (100%)
ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಿಂದ ಪರೀಕ್ಷೆಗೆ ಹಾಜರಾದ ಒಟ್ಟು 57 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನಲ್ಲಿ ಸುಹಾಸ್ ಎಂಕೆ. 585 ಅಂಕ ಪಡೆದು ಪ್ರಥಮ ಸ್ಥಾನದಲ್ಲಿ, ಹಾಗೂ ಅನನ್ಯ ಪಿಕೆ. 574ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಅಂಬಿಕಾ ವಸತಿಯುತ ಪದವಿ ಪೂರ್ವ ಕಾಲೇಜು ಬಪ್ಪಳಿಗೆ (98.58%)
ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿ ಪೂರ್ವ ಕಾಲೇಜಿನಿಂದ 141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 50 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ.98.58 ಫಲಿತಾಂಶ ದಾಖಲಿಸಿಕೊಂಡಿದೆ.
ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರು (97.61%)
ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆ ಗೆ ಹಾಜರಾಗಿದ್ದು, 41 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 100, ಮತ್ತು ಕಲಾ ವಿಭಾಗದಲ್ಲಿ ಶೇಕಡಾ 89 ಫಲಿತಾಂಶ ದಾಖಲಾಗಿದೆ.
ವಿವೇಕಾನಂದ ಪಿಯು ಕಾಲೇಜು ಪುತ್ತೂರು (96%)
ವಿವೇಕಾನಂದ ಪದವಿ ಪೂರ್ವ ಕಾಲೇಜಿನಿಂದ ಈ ಬಾರಿ ಒಟ್ಟು 824 ವಿದ್ಯಾರ್ಥಿಗಳು ಪರೀಕ್ಷೆ ಗೆ ಹಾಜರಾಗಿದ್ದರು. 790 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ. 96 ಫಲಿತಾಂಶ ದಾಖಲಿಸಿದೆ. ಒಟ್ಟು 222 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ನರೇಂದ್ರ ಪಿಯು ಕಾಲೇಜು ಪುತ್ತೂರು (95% )
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜಿನಿಂದ 71 ವಿದ್ಯಾರ್ಥಿಗಳು ಹಾಜರಾಗಿದ್ದು, 67 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶೇ. 95 ಫಲಿತಾಂಶ ದಾಖಲಿಸಿದೆ. 18 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ತನ್ಮಯೀ ಎಂಬ ವಿದ್ಯಾರ್ಥಿನಿ 589 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನದಲ್ಲಿದ್ದಾರೆ.
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪುತ್ತೂರು (94%)
ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 532 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 497 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ. 94 ಫಲಿತಾಂಶ ದಾಖಲಾಗಿದೆ.
ಆಯಿಶಾ ಹೆಣ್ಮಕ್ಕಳ ಪ ಪೂ ಕಾಲೇಜು ಆತೂರು( 92%)
ಆತೂರು ಆಯಿಶಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಶೇಕಡಾ 92 ಫಲಿತಾಂಶ ದಾಖಲಾಗಿದ್ದು, 2 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜು(91.17%)
ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಶೇ.91.17 ಫಲಿತಾಂಶ ದಾಖಲಾಗಿದೆ.
ಮರ್ಕಝುಲ್ ಹುದಾ ಮಹಿಳಾ ಪದವಿ ಪೂರ್ವ ಕಾಲೇಜು ಕುಂಬ್ರ(91%)
ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 107 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 97 ವಿದ್ಯಾರ್ಥಿಗಳು ತೇರ್ಡೆಯಾಗಿದ್ದಾರೆ. 15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 64 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಶೇ.91 ಫಲಿತಾಂಶ ದಾಖಲಾಗಿದೆ.
ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ನೆಲ್ಯಾಡಿ (90.57%)
ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 138 ವಿದ್ಯಾರ್ಥಿಗಳ ಪೈಕಿ 125 ಮಂದಿ ಉತ್ತೀರ್ಣಗೊಂಡಿದ್ದಾರೆ. ಶೆಕಡಾ 90.57 ಫಲಿತಾಂಶ ದಾಖಲಾಗಿದೆ. 21 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು(90.32%)
ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 62 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ಪ್ರಥಮ ಶ್ರೇಣಿಯಲ್ಲಿ 33 ವಿದ್ಯಾರ್ಥಿಗಳು ತೇರ್ಗಡೆಹೊಂದಿ, ಶೇ.90.32% ಫಲಿತಾಂಶ ಪಡೆದಿದೆ.
ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು (90%)
ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 257 ವಿದ್ಯಾರ್ಥಿಗಳ ಪೈಕಿ 230 ವಿದ್ಯಾರ್ಥಿಗಳು ತೇರ್ಗಡೆಹೊಂದಿ ಶೇಕಡಾ 90 ಫಲಿತಾಂಶ ಪಡೆದಿದೆ. 36 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪೂಜಾ ಅತಾವಲೆ 585 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಸರಸ್ವತೀ ಪದವಿಪೂರ್ವ ವಿದ್ಯಾಲಯ ಕಡಬ (89.41%)
ಕಡಬ ಸರಸ್ವತೀ ಪದವಿಪೂರ್ವ ವಿದ್ಯಾಲಯದಲ್ಲಿ ಒಟ್ಟು 19 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಶೇ.89.47 ಫಲಿತಾಂಶ ದಾಖಲಿಸಿದೆ.
ಶ್ರೀಕೃಷ್ಣ ಪದವಿ ಪೂರ್ವ ಪಟ್ಟೆ (87.23%)
ಪಟ್ಟೆ ಶ್ರೀಕೃಷ್ಣ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 47 ವಿದ್ಯಾರ್ಥಿಗಳ ಪೈಕಿ 41 ಮಂದಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 36 ವಿದ್ಯಾರ್ಥಿಗಳ ಪೈಕಿ 34 ತೇರ್ಗಡೆಯಾಗಿ ಶೇಕಡಾ 94.4% ಫಲಿತಾಂಶ ಪಡೆದಿದೆ.
ಬುಶ್ರಾ ಪದವಿ ಪೂರ್ವ ಕಾಲೇಜು ಕಾವು (85.71%)
ಕಾವು ಬುಶ್ರಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮಾತ್ರವಿದ್ದು, ಒಟ್ಟು 14 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶೇಕಡಾ 85.71 ಫಲಿತಾಂಶ ಪಡೆದಿದೆ.
ಗಜಾನನ ಪದವಿ ಪೂರ್ವ ಕಾಲೇಜು ಈಶ್ವರಮಂಗಲ(81%)
ಈಶ್ವರಮಂಗಲ ಗಜಾನನ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 25 ಮಂದಿ ತೇರ್ಗಡೆಯಾಗಿದ್ದಾರೆ. 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ.81 ಫಲಿತಾಂಶ ದಾಖಲಾಗಿದೆ.
ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿ ಕಾಲೇಜು(70%)
ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರ ಇಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಒಟ್ಟು ಶೇ. 70 ಫಲಿತಾಂಶ ಲಭಿಸಿದೆ. ವಿಜ್ಷಾನ ವಿಭಾಗದಲ್ಲಿ ಶೇ. 100 ಪಲಿತಾಂಶ ಪಡೆದುಕೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ 90 ಶೇ. ಪಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಕಳಪೆ ಪಲಿತಾಂಶ ಪ್ರಕಟವಾಗಿದ್ದು ಶೇ. 40 ಪಡೆದುಕೊಂಡಿದೆ.