ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ನ ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಯಡಿಯಲ್ಲಿ ಜಲ ಸಂರಕ್ಷಣಾ ಅಭಿಯಾನ, ವಿಶೇಷ ಗ್ರಾಮ ಸಭೆಯು ಗ್ರಾ.ಪಂ, ಸಭಾಂಗಣದಲ್ಲಿ ಜು.13ರಂದು ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಂತ್ರಿಕಾಧಿಕಾರಿ ವಿನೋದ್, ಗ್ರಾ.ಪಂ, ಮಾಜಿ ಸದಸ್ಯರಾದ ಗಣೇಶ್ ಉದನಡ್ಕ, ರಾಮಣ್ಣ ಗೌಡ ಮುಗರಂಜ, ಸುರೇಶ್ ಓಡಬಾಯಿ ಉಪಸ್ಥಿತರಿದ್ದರು. ಪಿಡಿಓ ಜಯಪ್ರಕಾಶ್ ಸ್ವಾಗತಿಸಿ, ಸಿಬ್ಬಂದಿ ತಿಮ್ಮಪ್ಪ ಗೌಡ ಬೀರುಕುಡಿಕೆ ವಂದಿಸಿದರು.