ಶೇಕಡಾ 50ಕ್ಕೂ ಅಧಿಕ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ.
ಉಪ್ಪಿನಂಗಡಿ: ೨೦೧೯-೨೦ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಂತೆ ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು
ಶೇಕಡಾ ನೂರು ಫಲಿತಾಂಶ ಪಡೆದುಕೊಂಡಿದೆ ಎಂದು ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ೫೭ ವಿದ್ಯಾರ್ಥಿಗಳಲ್ಲಿ ೨೯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ ೨೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನಲ್ಲಿ ಸುಹಾಸ್ ಎಂಕೆ. ೫೮೫ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ, ಹಾಗೂ ಅನನ್ಯ ಪಿಕೆ. ೫೭೪ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಒಟ್ಟು ಆರು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ ಎಂದು ಎಚ್.ಕೆ. ಪ್ರಕಾಶ್ ತಿಳಿಸಿದ್ದಾರೆ.