ಕಾಣಿಯೂರು: ಶೈಕ್ಷಣಿಕ ವರ್ಷದಲ್ಲಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜು ಶೇ ೯೧ ಫಲಿತಾಂಶವನ್ನು ಪಡೆದುಕೊಂಡಿದೆ. ಕಾಲೇಜಿನ ವಾಣಿಜ್ಯ ಹಾಗೂ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು ೮೭ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೭೯ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ ೯೧ ಫಲಿತಾಂಶ ಕಾಲೇಜು ಗಳಿಸಿಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಜಯಂತಿ ಅವರು ತಿಳಿಸಿದ್ದಾರೆ.
ಕಲಾ ವಿಭಾಗಕ್ಕೆ ಶೇ ೮೦ ಫಲಿತಾಂಶ
ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗ ಶೇ ೮೦ ಫಲಿತಾಂಶ ಗಳಿಸಿದೆ. ಕಲಾ ವಿಭಾಗದಿಂದ ಒಟ್ಟು ೨೦ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೧೬ ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಎಡಮಂಗಲ ಸೀತಾರಾಮ ಮತ್ತು ವತ್ಸಲಾ ದಂಪತಿಗಳ ಪುತ್ರಿ ಯಶಸ್ವಿನಿ ೪೮೨ ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡರೆ, ಮುರುಳ್ಯ ರಾಧಾಕೃಷ್ಣ ಮತ್ತು ಪುಷ್ಪಾವತಿ ದಂಪತಿಗಳ ಪುತ್ರಿ ಸುಷ್ಮಾ ೪೬೫ ಅಂಕ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗಕ್ಕೆ ಶೇ ೯೪.೧ ಫಲಿತಾಂಶ
ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಶೇ ೯೪.೧ ಫಲಿತಾಂಶವನ್ನು ಗಳಿಸಿಕೊಂಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು ೫೧ ಮಂದಿ ವಿದ್ಯಾರ್ಥಿಗಳಲ್ಲಿ ೪೮ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ೪ ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ. ಅಗಳಿ ವಿಠಲ ಗೌಡ ಮತ್ತು ಚಂದ್ರಾವತಿ ದಂಪತಿಗಳ ಪುತ್ರಿ ಶ್ರೇಯಾ ೫೪೩ ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡರೆ, ಅಂಕಜಾಲು ನಾರಾಯಣ ಮತ್ತು ಲಕ್ಷ್ಮೀ ದಂಪತಿಗಳ ಪುತ್ರಿ ಸುಚಿತ್ರಾ ೫೩೮ ಅಂಕ ಪಡೆದು ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.
ಸವಣೂರು ಮುಗೇರು ಪದ್ಮನಾಭ ಮತ್ತು ಸುವರ್ಣ ದಂಪತಿಗಳ ಪುತ್ರಿ ಶಿಲ್ಪಾ ೫೨೪ ಅಂಕ ಪಡೆದು ತೃತೀಯ ಸ್ಥಾನ ಪಡದುಕೊಂಡಿದ್ದಾರೆ. ಎಡಮಂಗಲ ಸುಂದರ ಮತ್ತು ಇಂದಿರಾ ದಂಪತಿಗಳ ಪುತ್ರಿ ಸ್ಪರ್ಶ ೫೧೨ ಅಂಕ ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗಕ್ಕೆ ಶೇ ೯೪ ಫಲಿತಾಂಶ
ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ ೯೪ ಫಲಿತಾಂಶವನ್ನು ಗಳಿಸಿಕೊಂಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು ೧೬ ಮಂದಿ ವಿದ್ಯಾರ್ಥಿಗಳಲ್ಲಿ ೧೫ ವಿದ್ಯಾರ್ಥಿಗಳು ತೆರ್ಗಡೆ ಹೊಂದಿದ್ದಾರೆ. ಚಾರ್ವಾಕ ಮುದುವ ಬೆಳಿಯಪ್ಪ ಗೌಡ ಮತ್ತು ಭವಾನಿ ದಂಪತಿಗಳ ಪುತ್ರ ಚರಣ್ ಕುಮಾರ್ ೫೫೮ ಅಂಕ ಪಡೆದುಕೊಂಡು ಪ್ರಥಮ ಸ್ಥಾನ ಪಡೆದುಕೊಂಡರೆ, ಎಡಮಂಗಲ ವೆಂಕಟ್ರಮಣ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಸ್ನೇಹಾ ೫೫೨ ಅಂಕ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚಾರ್ವಾಕ ಕುಶ ಮತ್ತು ವಸಂತಿ ದಂಪತಿಗಳ ಪುತ್ರ ಸೂರಜ್ ೫೨೧ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.