ಪುತ್ತೂರು: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ಡು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆ ಇದರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಕಾಲೇಜಿಗೆ ಶೇಕಡಾ ೯೮.೫೭ ಫಲಿತಾಂಶ ಬಂದಿರುತ್ತದೆ. ಒಟ್ಟು ೧೪೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ೫೦ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಹಾಗೂ ೮೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದರೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಸಾಧನೆ ಮಾಡಿರುವಂಥದ್ದು ಅನನ್ಯವಾದುದು.