HomePage_Banner
HomePage_Banner
HomePage_Banner
HomePage_Banner

ಕಡಬ: ಅಡ್ಡಗದ್ದೆ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ

Puttur_Advt_NewsUnder_1
Puttur_Advt_NewsUnder_1

ಕಡಬ: ಸುಳ್ಯ ಶಾಸಕ ಎಸ್ .ಅಂಗಾರ ಅವರ ಅನುದಾನದಲ್ಲಿ ಕಡಬ ಕಾಲೇಜು ರಸ್ತೆಯಲ್ಲಿನ ಅಡ್ಡಗದ್ದೆ ರಸ್ತೆಯ ಕಾಂಕ್ರೀಟಿಕರಣಕ್ಕೆ ಮಂಗಳವಾರ ಗುದ್ದಲಿಪೂಜೆ ನೆರವೇರಿಸಲಾಯಿತು.

ಶಾಸಕರ ಶಿಫಾರಸ್ಸಿನಂತೆ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಮುಖಾಂತರ ಬಿಡುಗಡೆಯಾದ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಂಕ್ರೀಟಿಕರಣಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು. ಕಡಬ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಗಿರೀಶ್ ಎ,ಪಿ ತೆಂಗಿನ ಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಡಬ ಸಿ.ಎ ಬ್ಯಾಂಕ್ ಮಾಜಿ ಅಧ್ಯಕ್ಷ ಸುಂದರ ಗೌಡ ಮಂಡೆಕರ, ಬಿಜೆಪಿ ಹಿರಿಯ ಮುಖಂಡ ಸತೀಶ್ ನಾಯಕ್, ಬಿಜೆಪಿ ಯುವ ಮುಖಂಡ ಅಶೋಕ್ ಕುಮಾರ್ ಪಿ, ಕಡಬ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಶರೀಫ್ ಪ್ರಮುಖರಾದ ಉದಯ ಪೂವಳ, ಇಬ್ರಾಹಿಂ ತ್ರೀಸ್ಟಾರ್, ಮಹಮ್ಮದ್ ಕೆ, ಫಯಾಝ್ ಅಹಮ್ಮದ್ , ಶಮೀರ್ ಕಡಬ, ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವಿ ಪ್ರಸಾದ್ ಕುತ್ಯಾಡಿ, ಗುತ್ತಿಗೆದಾರ ಜಲೀಲ್ ಬೈತಡ್ಕ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದಾ ಸುಳ್ಯ ಮಂಡಲ ಕಾರ್ಯದರ್ಶಿ ಫಯಾಜ್ ಕೆನರಾ ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.