ಹಿರೇಬಂಡಾಡಿ: ಮಂಗಳೂರಿನಲ್ಲಿ ನಡೆಯುವ ಎಸ್ಎಸ್ಎಲ್ಸಿ ಮೌಲ್ಯಮಾಪನಕ್ಕೆ ಕಡಬ ಮತ್ತು ನೆಲ್ಯಾಡಿ ಭಾಗದಿಂದ ತೆರಳುವ ಮೌಲ್ಯಮಾಪಕರಿಗೆ ಉಪ್ಪಿನಂಗಡಿಯಿಂದ ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು ಉಪ್ಪಿನಂಗಡಿ ಹೋಟೆಲ್ ಆದಿತ್ಯದ ಬಳಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಜಿ.ಪಂ.ಸದಸ್ಯೆ ಶಯನಾ ಜಯಾನಂದರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ನೀಡಿ ಶುಭಹಾರೈಸಿದರು. ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ಕಾರ್ಯಾಧ್ಯಕ್ಷ ಉಮೇಶ್ ಶೆಣೈ, ಉಪಪ್ರಾಂಶುಪಾಲ ದಿವಾಕರ ಆಚಾರ್ಯ, ಉಪ್ಪಿನಂಗಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ ಈ ವೇಳೆ ಉಪಸ್ಥಿತರಿದ್ದರು. ಶಿಕ್ಷಕರಾದ ಹರಿಕಿರಣ್ ಸ್ವಾಗತಿಸಿ, ನಿರೂಪಿಸಿದರು. ಶ್ರೀಧರ ಭಟ್ ವಂದಿಸಿದರು. ಇತರೇ ಶಿಕ್ಷಕರು ಉಪಸ್ಥಿತರಿದ್ದರು. ರೆಂಜಿಲಾಡಿ ಸಾಂತೋಮ್ ವಿದ್ಯಾಕೇಂದ್ರ ಹಾಗೂ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯವರು ಬಸ್ಸುಗಳನ್ನು ಒದಗಿಸಿ ಸಹಕರಿಸಿದರು.