ಪುತ್ತೂರು: ಜು.14ರಂದು ಪುತ್ತೂರು ಸರಕಾರಿ ಆಸ್ಪತ್ರೆಯ 45 ವರ್ಷ ವಯಸ್ಸಿನ ಆಯುರ್ವೇದ ವೈದ್ಯೆ ಮತ್ತು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊಳ್ತಿಗೆ ನಿವಾಸಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.
ಮಿತ್ತೂರು ನಿವಾಸಿಯಾಗಿದ್ದು ಪುತ್ತೂರು ಸರಕಾರಿ ಆಸ್ಪತ್ರೆಯ ಆಯುರ್ವೇದ ವಿಭಾಗದಲ್ಲಿ ವೈದ್ಯರೊಬ್ಬರು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೋನಾ ದೃಢಪಟ್ಟಿದೆ. ಅವರು ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಕೊಳ್ತಿಗೆ ಗ್ರಾಮದ 29 ವರ್ಷದ ಯುವಕರೊಬ್ಬರು ಅನಾರೋಗ್ಯ ನಿಮಿತ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆ ವೇಳೆ ಅವರಿಗೆ ಕೊರೋನಾ ದೃಢಪಟ್ಟಿದೆ. ಅವರು ಮಂಗಳೂರು ಅಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.