ನೆಲ್ಯಾಡಿ: ೨೦೧೯-೨೦ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿಗೆ ಶೇ. ೯೦.೩೮ ತೇರ್ಗಡೆ ಫಲಿತಾಂಶ ಲಭಿಸಿದೆ.
ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಒಟ್ಟು ೬೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ೫೬ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ. ೯೦.೩೮ ಫಲಿತಾಂಶ ಬಂದಿದೆ. ೧೨ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ೩೩ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ೩ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗಕ್ಕೆ ಶೇ.೮೬.೦೧ ಹಾಗೂ ವಿಜ್ಞಾನ ವಿಭಾಗಕ್ಕೆ ಶೇ. ೯೬.೧೫ ತೇರ್ಗಡೆ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ೩೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ ೩೧ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.೮೬.೦೧ ಫಲಿತಾಂಶ ಬಂದಿದೆ. ೭ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ. ಶುಭಾ ಚೆರಿಯನ್ ೫೫೭, ವಿದ್ಯಾ ೫೪೩, ಹಿತೇಶ್ ೫೪೯, ಕರುಣಾ ೫೩೭, ನಿಮ್ಮಿ ೪೯೯, ಆದರ್ಶ್ ೪೯೮, ಅನೀಶ ೪೯೨ ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ.
ವಿಜ್ಞಾನ ವಿಭಾಗ:
ವಿಜ್ಞಾನ ವಿಭಾಗದಲ್ಲಿ ೨೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ೨೫ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ. ೯೬.೧೫ ಫಲಿತಾಂಶ ಬಂದಿದೆ. ೫ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ. ಬಿಪಿನ ೫೫೩, ಮಾನ್ಯ ೫೪೩, ನೀತಾ ೫೦೦, ನಿಶಾ ೫೨೭, ಅಬಿದ ೫೦೫ ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.