ವೆನ್ಲಾಕ್ ಆಸ್ಪತ್ರೆಗೆ ಹೆಚ್ಚುವರಿ 300 ಆಕ್ಸಿಜನ್ ಬೆಡ್, ತಾಲೂಕು ಆಸ್ಪತ್ರೆಗಳಿಗೂ 30 ಬೆಡ್ | ಡಿಸಿಎಂ ಜೊತೆಗಿನ ವಿಡಿಯೋ ಸಂವಾದದಲ್ಲಿ ನಿರ್ಧಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ ಆಸ್ಪತ್ರೆಯಾಗಿರುವ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 300 ಆಕ್ಸಿಜನ್‌ಯುಕ್ತ ಬೆಡ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್ ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್‌ರವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಂವಾದದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತ ಚರ್ಚೆಯ ಸಂದರ್ಭ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್‌ಗಳ ಕೊರತೆಯಾಗದಂತೆ ಕ್ರಮಕೈಗೊಳ್ಳಲು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 300ಬೆಡ್ ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಿಗೆ 30ಬೆಡ್, ಸಮುದಾಯ ಭವನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೆಡ್‌ಗಳಿಗೂ ಆಕ್ಸಿಜನ್ ಸಂಪರ್ಕ ಕಲ್ಪಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ 150 ಆಕ್ಸಿಜನ್ ಬೆಡ್‌ಗಳು ಲಭ್ಯವಿದೆ. ಹೆಚ್ಚುವರಿ 300 ಬೆಡ್‌ಗಳಿಗೆ ಆಕ್ಸಿಜನ್ ಸಂಪರ್ಕ ಜೋಡಿಸುವ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಕ್ಸಿಜನ್ ಬೆಡ್ ಕೊರತೆ ಆಗದಂತೆ ತಡೆಗಟ್ಟಲು ಈ ಕ್ರಮ ಪರಿಣಾಮಕಾರಿಯಾಗಲಿದೆ ಎಂದಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾಧಿಕಾರಿ ಸಿಂದೂ ರೂಪೇಶ್,ಅಪರ ಜಿಲ್ಲಾಧಿಕಾರಿ, ಉಪ ಆಯುಕ್ತರು, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ವೈದ್ಯಕೀಯ ಅಧಿಕಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.