ಭೂಗತ ಲೋಕದ ಕಥಾನಕ ‘ಹವಾಲ’ ಚಲನಚಿತ್ರ ಬೆಳ್ಳಿತೆರೆಗೆ

  • ಪುತ್ತೂರಿನ ಪ್ರವೀಣ್ ಶೆಟ್ಟಿ ನಿರ್ಮಾಪಕ
  • ಕೋಟಿ ರೂ ವೆಚ್ಚದ ಅಂಡರ್ ವರ್ಲ್ಡ್ ಕಥೆಯ ರೋಚಕ ಸಿನಿಮಾದಲ್ಲಿ ತುಳು ಭಾಷೆಯ ಸೊಗಡು- ಹುಲಿ ನೃತ್ಯ

ಪುತ್ತೂರು: ಪುತ್ತೂರಿನ ಪ್ರವೀಣ್ ಶೆಟ್ಟಿಯವರ ನಿರ್ಮಾಣದ ವಿನೂತನ ಚಿತ್ರ ‘ಹವಾಲ’  ಜು.31ರಂದು ಬಿಡುಗಡೆಗೊಳ್ಳಲಿದೆ. ಕೊರೋನಾ ಲಾಕ್‌ಡೌನ್ ಸಿನಿಮಾ ರಂಗಕ್ಕೂ ಬಲವಾದ ಪೆಟ್ಟು ನೀಡಿದೆ. ಆದರೆ ಚಿತ್ರತಂಡದ ಹುಮ್ಮಸ್ಸು ಮಾತ್ರ ಕಡಿಮೆಯಾಗಿಲ್ಲ. ಚಿತ್ರ ಪ್ರೇಮಿಗಳಿಗಾಗಿ ವಿನೂತನವಾದ ಕಥಾ ಹಂದರ ಹೊಂದಿರುವ `ಹವಾಲ’ ಚಿತ್ರ ನಿರ್ಮಾಣಗೊಂಡಿದ್ದು, ಇದೇ ಜು.31ರಂದು ವರ್ಲ್ಡ್ ಪ್ರೀಮಿಯರ್( ಒಟಿಟಿ)ನಲ್ಲಿ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಶಶಿ ಕುಮಾರ್ ಪಂಡಿತ್ ಅರ್ಪಿಸುವ ಈ ಚಿತ್ರವನ್ನು ಪುತ್ತೂರಿನ ಪ್ರವೀಣ್ ಶೆಟ್ಟಿಯವರು ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಚಿತ್ರ ಭೂಗತ ಲೋಕದ ಅತ್ಯದ್ಭುತವಾದ ರೋಚಕ ಕಥೆಯನ್ನೊಳಗೊಂಡಿದೆ.

ಆಪಲ್ಸ್ ಆಂಡ್ ಪಿಯರ್ಸ್ ಫಿಲ್ಮಿ ಮೈಸ್ಟಿಕ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಅಗ್ನಿಸಾಕ್ಷಿ ಖ್ಯಾತಿಯ ಅಮಿತ್ ರಾವ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ಉದಯೋನ್ಮುಖ ಸಂಗೀತ ನಿರ್ದೇಶಕರಾದ ಕಿಶೋರ್ ಎಕ್ಸಾ ಎರಡು ಭಾಷೆಗಳಲ್ಲೂ ಸಾಹಿತ್ಯ ಬರೆದು ರಾಗ ಸಂಯೋಜಿಸಿದ್ದಾರೆ.

ಶ್ರೀನಿವಾಸ್ ಮತ್ತು ಅಮಿತ್ ರಾವ್ ನಾಯಕ ನಟರಾಗಿ ಹಾಗೂ ಕಮಲಿ ಧಾರಾವಾಹಿ ಖ್ಯಾತಿಯ ಅಮೂಲ್ಯ ಗೌಡ ಮತ್ತು ಕಿರುತೆರೆ ನಟಿ ಸಹನಾ ಪೂಜಾರಿ ನಾಯಕಿ ನಟಿಯರಾಗಿ ಅಭಿನಯಿಸಿದ್ದಾರೆ. ನಿರ್ದೇಶನ ವಿಭಾಗದಲ್ಲಿ ಚೆನ್ನೈ ಮೂಲದ ಎಸ್.ಪಿ. ಸೆಲ್ವಂ ಜೊತೆ ಸ್ಥಳೀಯರಾದ ರಾಜ್ ಕೃಷ್ಣ ಉಡುಪಿ ಸಹನಿರ್ದೇಶಕರಾಗಿ ಹಾಗೂ ಸಂತೋಷ್ ಕೊಲ್ಯ ಮತ್ತು ಹೆನ್ಲಿ ವಿಶಾಲ್ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಮೊತ್ತಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ತುಳುನಾಡಿಗೆ ಸಂಬಂಧ ಪಟ್ಟ ದೃಶ್ಯಗಳನ್ನು ಸಂಯೋಜಿಸಿದ್ದು, ತುಳು ಭಾಷೆಯ ಸೊಗಡು ಮತ್ತು ಹುಲಿ ವೇಷ ಕುಣಿತ ಸಿನಿಮಾದ ಹೈಲೈಟ್ ಆಗಿದೆ.

                                                                   ಪ್ರವೀಣ್‌ ಶೆಟ್ಟಿ

ತಮಿಳು ಚಿತ್ರರಂಗದ ದಿಗ್ಗಜರಾದ ನೆಳಲ್ ಗಲ್ ರವಿ, ಮೀಸೆ ರಾಜೇಂದ್ರ, ರಂಜನ್ ಮತ್ತು ಸೂಪರ್ ಹಿಟ್ ತಮಿಳು ಸಿನಿಮಾ ‘ಅಡಿತಡಿ’ ಯ ನಿರ್ದೇಶಕರಾದ ಶಿವಶಗುಲ್ ಕೂಡ ಬಹುಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ದೇಯಿಬೈದೆತಿ ಚಲನಚಿತ್ರದ ನಿರ್ದೇಶಕರಾದ ಸೂರ್ಯೋದಯ ಪೆರಂಪಳ್ಳಿ ಭೂಗತ ಲೋಕದ ಡಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶ್ರೀನಾಥ್ ವಸಿಷ್ಠ, ಕಾಮಿಲ್ ಷೇಕ್ ಮುಂಬೈ, ಕರಾವಳಿಗರಾದ ಪ್ರವೀಣ್ ಶೆಟ್ಟಿ, ಸಂತೋಷ್ ಕೊಲ್ಯ, ಅರುಣ್ ಶೆಟ್ಟಿ ಜೆ ಪ್ಪು, ಕಿಶೋರ್ ಕುಂಪಲ ಪ್ರಧಾನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ನಿರ್ಮಾಪಕ ಪ್ರವೀಣ್ ಶೆಟ್ಟಿಯವರು ಕಬಕ ಸಮೀಪದ ಅಳಕೆಮಜಲು ನಿವಾಸಿಯಾಗಿದ್ದು ಉದ್ಯಮಿಯಾಗಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿರುವ ಪ್ರವೀಣ್ ಶೆಟ್ಟಿಯವರು ವಿದ್ಯಾಮಾತ ಫೌಂಡೇಶನ್ ನ ಕಾರ್ಯಾಧ್ಯಕ್ಷರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.