ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾಮಗಾರಿ ಲೋಪ | ತನಿಖಾಧಿಕಾರಿ ನೇಮಕ

Puttur_Advt_NewsUnder_1
Puttur_Advt_NewsUnder_1

 

ಸುಬ್ರಹ್ಮಣ್ಯ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

ಕಡಬ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜು.೨೨ರಂದು ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಕಾಮಗಾರಿಗಳಲ್ಲಿ ನಡೆದ ಲೋಪ ದೋಷಗಳು, ವಸತಿ ಗೃಹದ ಕಾಮಗಾರಿ ವಿಳಂಬ ಬಗ್ಗೆ ಸಾರ್ವಜನಿಕ ದೂರುಗಳ ಬಗ್ಗೆ ತನಿಖೆ ನಡೆಸಲು ಎಡಿಸಿ ಅವರಿಗೆ ಕೆಲಸದ ಒತ್ತಡ ಇರುವುದರಿಂದ ಅವರ ಬದಲು ಬೆಂಗಳೂರು ಆಯುಕ್ತರ ಕಛೇರಿಯ ಕೇಂದ್ರ ಸ್ಥಾನಿಕ ಸಹಾಯಕ ಅಭಿಜಿನ್ ಅವರು ಸ್ಥಳ ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ಮಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ದೇವಸ್ಥಾನಕ್ಕೆ ಸಂಬಂಧಪಟ್ಟ ಆಸ್ತಿಗಳ ಸಂರಕ್ಷಣೆಗೆ ಸೂಚಿಸಲಾಯಿತು. ಮತ್ತು ದೇವಸ್ಥಾನದ ಕಾಮಗಾರಿಗಳಿಗೆ ನ್ಯಾಯಲಯದಿಂದ ತಡೆಯಾಜ್ಞೆ ಬಂದಿದ್ದು, ಅದನ್ನು ತೆರೆವುಗೊಳಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿದೆ, ದೇವಸ್ಥಾನಕ್ಕೆ ಸಂಬಂಧಿಸಿದ ವಿವಿಧ ಖಾಸಗಿ ಪ್ರಕರಣಗಳನ್ನು ವಿಶೇಷ ನ್ಯಾಯವಾದಿಗಳನ್ನು ನೇಮಿಸಿಕೊಂಡು ಶೀಘ್ರ ಬಗೆಹರಿಸುವಂತೆ ಸೂಚಿಸಲಾಗಿದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆಗಳು ಸಭೆಯಲ್ಲಿ ನಡೆಯಿತು. ದೇವಸ್ಥಾನದ ಎಲ್ಲಾ ಆಡಳಿತಾತ್ಮಕ ವಿಚಾರಗಳನ್ನು ಆಡಿಟ್ ನಡೆಸಲು ವಿಶೇಷ ಅಡಿಟರ್‌ನ್ನು ನೇಮಕ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾಮಗಾರಿ ಸ್ಥಳಗಳಿಗೆ ಸಚಿವರ ಭೇಟಿ:
ಸಚಿವರು ಮೊದಲಿಗೆ ಆದಿ ಸುಬ್ರಹ್ಮಣ್ಯ ಬಳಿ ನಿರ್ಮಾಣಗೊಂಡ ೧೮೪ ಕೊಠಡಿಗಳ ವಸತಿಗೃಹ ಕಾಮಗಾರಿ ಪರಿಶೀಲಿಸಿದರು. ಒಳಚರಂಡಿ ಘಟಕಕ್ಕೆ ಭೇಟಿ ನೀಡಿ ನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಬಳಿಕ ನೀರು ಶುದ್ಧೀಕರಣ ಘಟಕ, ಇಂಜಾಡಿ ಬಳಿಯ ರಸ್ತೆ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಿದರು. ಕಾಶಿಕಟ್ಟೆ ಬಳಿಯ ಸರಕಾರಿ ಪ್ರಾಥಮಿಕ ಶಾಲಾ ಜಾಗದಲ್ಲಿ ರಸ್ತೆ ನಿರ್ಮಾಣ ಹಾಗೂ ಶಾಲಾ ಕಟ್ಟಡದ ಸ್ಥಳಾಂತರ ಕುರಿತು ಸ್ಥಳಕ್ಕೆ ಭೇಟಿ ನೀಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ, ಕಡಬ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ದೇವಸ್ಥಾನದ ಇಒ ರವೀಂದ್ರ ಎಂ.ಎಚ್., ಎಇಒ ಚಂದ್ರಶೇಖರ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.