ಕೋವಿಡ್ 19ರ ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ | ಕೋಡಿಂಬಾಡಿ ಗ್ರಾ.ಪಂ. ಕಾರ್ಯಪಡೆ ಸಭೆ ನಿರ್ಣಯ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ 19ರ ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕೋಡಿಂಬಾಡಿ ಗ್ರಾಮ ಪಂಚಾಯತ್ ಕಾರ್ಯಪಡೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮಗಳ ಗ್ರಾಮ ಕಾರ್ಯ ಪಡೆಯ ಸಭೆ ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು.


ದಿನೇ ದಿನೇ ಕೋವಿಡ್ ಪಾಸಿಟಿವ್ ಕೇಸ್‌ಗಳು ಹೆಚ್ಚಾಗುತ್ತಿದೆ, ಈ ಬಗ್ಗೆ ಗ್ರಾಮಾಂತರ ಪ್ರದೇಶದಲ್ಲಿ ಅವಶ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಅನವಶ್ಯಕವಾಗಿ ತಿರುಗಾಡುವ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವ, ಮಾಸ್ಕ್ ಧರಿಸದಿರುವ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ಹಾಗೂ ಅಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು. ಗ್ರಾಮ ಕಾರ್ಯಪಡೆ ಸದಸ್ಯರು ಗ್ರಾಮ ವ್ಯಾಪ್ತಿಯಲ್ಲಿ ಈ ಕುರಿತು ನಿಗಾ ವಹಿಸುವುದು ಮತ್ತು ಗ್ರಾ.ಪಂ.ಗೆ ಮಾಹಿತಿ ನೀಡುವುದು ಎಂಬುದಾಗಿ ತೀರ್ಮಾನಿಸಲಾಯಿತು.

 

ಡೆಂಗ್ಯೂ, ಮಲೇರಿಯಾ ಕುರಿತಾಗಿಯೂ ಜಾಗ್ರತೆ ವಹಿಸುವುದು, ಜನರು ತಮ್ಮ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿರಿಸಿಕೊಳ್ಳುವುದು ಹಾಗೂ ಈ ಬಗ್ಗೆ ಮನೆ ಮನೆಗೆ ಭೇಟಿ ನೀಡುವ ಅಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತೆಯರು ನೀಡುವ ಸಲಹೆ ಸೂಚನೆಗಳನ್ನು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಸಾರ್ವಜನಿಕರು ಪಾಲಿಸುವುದು ಅತ್ಯಗತ್ಯವಾಗಿರುತ್ತದೆ ಎಂದು ಮಾಹಿತಿ ನೀಡಲು ನಿರ್ಧರಿಸಲಾಯಿತು. ಗ್ರಾ.ಪಂ.ಆಡಳಿತಾಧಿಕಾರಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಮಾಹಿತಿ ನೀಡಿದರು. ಗ್ರಾ. ಪಂ.ಅಭಿವೃದ್ಧಿ ಅಧಿಕಾರಿ ಚಿತ್ರಾವತಿರವರು ಸುತ್ತೋಲೆಗಳ ಬಗ್ಗೆ ತಿಳಿಸಿದರು. ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿದರು. ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಸಂಧ್ಯಾ ರಾಮಚಂದ್ರ, ನಿಕಟಪೂರ್ವ ಉಪಾಧ್ಯಕ್ಷ ಬಾಬು ಗೌಡ, ಸದಸ್ಯರುಗಳಾದ ಜಗನ್ನಾಥ ಶೆಟ್ಟಿ ನಡುಮನೆ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರುಗಳು, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಹಿತ ಕಾರ್ಯಪಡೆ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.