ಉಪ್ಪಿನಂಗಡಿ: ಈಚರ್ ಲಾರಿ,ಬೈಕ್ ಡಿಕ್ಕಿ | ಬೈಕ್ ಸವಾರ ನಟ್ಟಿಬೈಲ್‌ನ ಗಣೇಶ್ ಮೃತ್ಯು

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಈಚರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜು.25ರಂದು ರಾತ್ರಿ ಸುಮಾರು 9.30ರ ವೇಳೆಗೆ ಸಂಭವಿಸಿದೆ.


ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಗಣೇಶ್(೨೩ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುರುಷರಕಟ್ಟೆ ನಿವಾಸಿ ನವೀನ ಎಂಬವರು ಗಾಯಗೊಂಡಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇವರಿಬ್ಬರು ಬೈಕ್‌ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ತರಕಾರಿ ಸಾಗಾಟ ಮಾಡುತ್ತಿದ್ದ ಈಚರ್ ಲಾರಿ ನಡುವೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಗಣೇಶ್‌ರವರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸಹಸವಾರ ನವೀನರವರ ಕಾಲಿಗೆ ಗಾಯವಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.