ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ “ರ್‍ಯಾಂಡಮ್ ಟೆಸ್ಟ್” ವರದಿ ಪಾಸಿಟಿವ್ – ಕಡಬ ಪಟ್ಟಣ ಪಂಚಾಯತ್ 48 ಗಂಟೆ ಸೀಲ್ ಡೌನ್

Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯವರನ್ನು ಜು.26 ರಂದು ರ್‍ಯಾಂಡಮ್ ಟೆಸ್ಟ್ ಮಾಡಲಾಗಿದ್ದು ಅದರ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಕಛೇರಿ ಮುಂದಿನ ೪೮ ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಮುಖ್ಯಾಧಿಕಾರಿಯವರು ಮಾತೃ ಇಲಾಖೆಯ ಸಹೋದ್ಯೋಗಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಅವರ ಪ್ರಾಥಮಿಕ ಸಂಪರ್ಕದ ಹಿನ್ನಲೆಯಲ್ಲಿ ಮುಖ್ಯಾಧಿಕಾರಿಯವರನ್ನು ಇಂದು ರ್‍ಯಾಂಡಮ್ ಟೆಸ್ಟ್ ಮಾಡಲಾಗಿದೆ.

ಸೀಲ್ ಡೌನ್, ಕಾರ್‍ಯಪಡೆ ಸಭೆ ಮುಂದೂಡಿಕೆ : ಕಡಬ ಪಟ್ಟಣ ಪಂಚಾಯತ್‌ನಲ್ಲಿ ಕೊರೋನಾ ಕಾರ್‍ಯಪಡೆಯ ಸಭೆ ಜು.೨೮ರಂದು ನಡೆಸಲು ಉದ್ದೇಶಿಸಲಾಗಿದ್ದು, ಇದೀಗ ಕಛೇರಿ ಸೀಲ್ ಡೌನ್ ಮಾಡಲಾಗಿದ್ದ ಹಿನ್ನಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ ಎಂದು ಪಟ್ಟಣ ಪಂಚಾಯತ್ ಕಛೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.