ಕೊಳ್ತಿಗೆ ಸಿ.ಎ.ಬ್ಯಾಂಕ್ ವತಿಯಿಂದ ಕೊರೊನಾ ವಾರಿಯರ್ಸ್‌ಗೆ ಗೌರವಾರ್ಪಣೆ

Puttur_Advt_NewsUnder_1
Puttur_Advt_NewsUnder_1

ಸವಣೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ನಡೆಯಿತು.

ಗೌರವಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಸಂತ ಕುಮಾರ್ ರೈ ದುಗ್ಗಳ ವಹಿಸಿದ್ದರು. ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಅಮಿತ್ ಕುಮಾರ್ ಟಿ, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆರೋಗ್ಯ ಸಹಾಯಕಿಯರಾದ ಅಕ್ಷತಾ, ಚೈತ್ರಾ, ಸುಧಾಕ್ಷಿಣಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ೯ ಆಶಾ ಕಾರ್ಯಕರ್ತೆಯರಿಗೆ ತಲಾ.೨೦೦೦ ರೂ.ಗಳಂತೆ ಪ್ರೋತ್ಸಾಹ ಧನ ನೀಡಲಾಯಿತು.
ವೇದಿಕೆಯಲ್ಲಿ ತಾ.ಪಂ.ಸದಸ್ಯ ರಾಮ ಪಾಂಬಾರು, ಕೊಳ್ತಿಗೆ ಗ್ರಾ.ಪಂ.ಆಡಳಿತಾಧಿಕಾರಿ ಸುರೇಶ್ ಕುಮಾರ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕರಾದ ಶರತ್, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಲಕ್ಷ್ಮೀ ಕೆ.ಜಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಂಸಾವತಿ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ವಸಂತ ಕುಮಾರ್ ಕೆ, ತೀರ್ಥಾನಂದ ದುಗ್ಗಳ, ಅಣ್ಣಪ್ಪ ನಾಯ್ಕ, ಗುರುವಪ್ಪ ಎಂ, ನಾಗವೇಣಿ, ವಿಶಾಲಾಕ್ಷೀ, ವೆಂಕಟ್ರಮಣ ಕೆ.ಎಸ್, ಶಿವರಾಮ ಪೂಜಾರಿ, ಗಂಗಾಧರ ಗೌಡ ಕೆಮ್ಮಾರ, ಕೊಳ್ತಿಗೆ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಪ್ರಮೋದ್ ಕೆ.ಎಸ್, ಸಹಕಾರಿ ಸಂಘದ ಸಹ ಕಾರ್ಯನಿರ್ವಹಣಾಧಿಕಾರಿ ಗಿರಿಜಾ, ಸಿಬ್ಬಂದಿಗಳಾದ ಬಾಲಗಂಗಾಧರ ಕೆ, ಸುಬ್ಬಯ್ಯ ಕೆ., ಜಯರಾಮ ಕೆ, ಪುನೀತ್ ಡಿ, ಹುಕ್ರಪ್ಪ ಗೌಡ ನಡುಮನೆ, ಉಮೇಶ್ ದಯಾನಂದ ಉಪಸ್ಥಿತರಿದ್ದರು. ನಿರ್ದೇಶಕ ಸತೀಶ್ ಪಾಂಬಾರು ಸ್ವಾಗತಿಸಿದರು. ಭರತ್‌ರಾಜ್ ಕೆ. ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.