HomePage_Banner
HomePage_Banner
HomePage_Banner
HomePage_Banner

ನರಿಮೊಗರು ಬಿಂದು ಸಂಸ್ಥೆಯಲ್ಲಿ ರ್‍ಯಾಪಿಡ್ ಆಂಟಿಜನ್ ಟೆಸ್ಟ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರಿಮೊಗರು ಪುರುಷರಕಟ್ಟೆಯಲ್ಲಿರುವ ಬಿಂದು ಸಂಸ್ಥೆಯಲ್ಲಿ ಜು.28ರಂದು ಕೊರೋನಾದ ಶೀಘ್ರ ವರದಿ ನೀಡುವ ಉಚಿತ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬಿಂದು ಸಂಸ್ಥೆಯ ಸಿಬಂದಿಗಳಿಗೆ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಲಾಯಿತು. ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೀಪಕ್ ರೈ ಹಾಗೂ ಆರೋಗ್ಯ ಇಲಾಖೆಯ ಸಿಬಂದಿಗಳು ಟೆಸ್ಟ್‌ನಲ್ಲಿ ಭಾಗವಹಿಸಿದ್ದರು. ಸುಮಾರು 250 ಕ್ಕೂ ಅಧಿಕ ಮಂದಿ ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಪಂಚಾಯತ್, ಕಚೇರಿಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ನಡೆಯಲಿದೆ.

ಮಧ್ಯಾಹ್ನ ಸಮುದಾಯ ಭವನದಲ್ಲಿ:
ಜು.28ರ ಮಧ್ಯಾಹ್ನ 2.30ಕ್ಕೆ ಪುತ್ತೂರು ನಗರ ಸಭಾ ಸಮುದಾಯ ಭವನದಲ್ಲಿ ಸಾರ್ವಜನಿಕರಿಗೆ ಉಚಿತ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ನಡೆಯಲಿದೆ. ಸಾರ್ವಜನಿಕರು ಇದರ ಸಧುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.