HomePage_Banner
HomePage_Banner
HomePage_Banner

ಜು.30,31: ಸಿಇಟಿ ಪರೀಕ್ಷೆ- ಪರೀಕ್ಷಾ ಕೇಂದ್ರದ ಸುತ್ತ ಎರಡು ದಿನ ನಿಷೇಧಾಜ್ಞೆ ಜಾರಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜು.30 ಹಾಗೂ ಜು.31ರಂದು ನಡೆಯಲಿರುವ 2020ನೇ ಸಾಲಿನ ವೃತ್ತಿ ಶಿಕ್ಷಣದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2020)ಯನ್ನು ಸುವ್ಯವಸ್ಥಿತವಾಗಿ, ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆಯಿಂದ ನಡೆಸುವ ನಿಟ್ಟಿನಲ್ಲಿ ಪುತ್ತೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿರುವ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿ ವಾತಾವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಲೂ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೊಷಿಸಿ, ನಿಷೇದಾಜ್ಞೆ ಜಾರಿಗೊಳಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ನಿರ್ದೇಶನಂದತೆ ಕ್ರಮ ವಹಿಸಲು ಆದೇಶಿಸಲಾಗಿದೆ. ಸುರಕ್ಷತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆಯನ್ನು ನಡೆಸುವ ದೃಷ್ಠಿಯಿಂದ ದಂಡ ಸಂಹಿತೆ 193ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಉಪ ವಿಭಾಗಾದಿರಿಯವರು ಅದೇಶಿಸಿರುತ್ತಾರೆ.

ಎಲ್ಲೆಲ್ಲಿ ನಿಷೇಧಾಜ್ಞೆ:
ಪುತ್ತೂರು ಉಪ ವಿಭಾಗದ ಪುತ್ತೂರು ತಾಲೂಕಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು, ನೆಹರು ನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ತಾಲೂಕಿನ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು, ಎಸ್‌ಡಿಎಂ ಈಎನ್‌ಡಿಪ ಪದವಿ ಪೂರ್ವ ಕಾಲೇಜು ಉಜಿರೆ, ಸುಳ್ಯ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವುಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರಲಿದೆ.

ಜು.30ರ ಪೂರ್ವಾಹ್ನ 10 ಗಂಟೆಯಿಂದ ಜು.31ರ ಅಪರಾಹ್ನ 4 ಗಂಟೆಯ ತನಕ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿರುವುದಲ್ಲದೆ ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಅಧಿ ಸೂಚನೆ ಹೊರಡಿಸಲಾಗಿದೆ. ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರು ಹಾಗೂ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರು ನಿರ್ದೇಶಿಲಾಗಿದೆ ಎಂದು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಆದೇಶದಲ್ಲಿ ಸೂಚಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.