HomePage_Banner
HomePage_Banner
HomePage_Banner

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ | ಮಕ್ಕಳ ಕಲಿಕೆಗೆ ಎಲ್ಲ ಆಯಾಮಗಳಿಂದಲೂ ಪ್ರಯತ್ನ – ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೋನಾ ಸಂದರ್ಭದಲ್ಲಿ ಆನ್‌ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್‌ನಲ್ಲಿ ಮಾತನಾಡಿದ ಸಚಿವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಬಂದೆರಗಿರುವುದರಿಂದ ಈ ಸಂದರ್ಭದಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ. ಈ ಎಲ್ಲ ಸಾಮೂಹಿಕ ಪ್ರಯತ್ನಗಳು ಗಟ್ಟಿರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೋಢೀಕರಿಸಿ ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋತ್ವೇವ್ ಫೌಂಡೇಷನ್, ಪ್ರಥಮ್, ಪ್ರಜಾಯತ್ನ, ಅಗಸ್ತ್ಯ ಫೌಂಡೇಷನ್, ಲೆಂಡ್ ಎ ಹ್ಯಾಂಡ್ ಇಂಡಿಯಾ, ವೈಟ್ಫೀಲ್ಡ್ರೆಡಿ ಸಮೃದ್ಧಿ ಟ್ರಸ್ಟ್, ಇಂಡಿಯನ್ ಲಿಟ್ರೆಸಿ ಪ್ರಾಜೆಕ್ಟ್, ಬಿಜಿವಿಎಸ್, ಎಸ್ಟಿಐಆರ್, ಏಕ್ ಸ್ಟೆಪ್-ದೀಕ್ಷಾ, ರೂಂಟುರೀಡ್‌ಇಂಡಿಯಾಟ್ರಸ್ಟ್, ಗ್ರಾಮ್, ಐ.ಎಲ್.ಪಿ. ಸೇರಿದಂತೆ ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.ಮಕ್ಕಳೇ ಪ್ರಮುಖವಾಗಿದ್ದು, ಅವರನ್ನು ಈ ಪರಿಸ್ಥಿತಿಯಲ್ಲಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ರೀತಿಯ ಸಾಧ್ಯತೆಗಳನ್ನು ಕ್ರೋಢೀಕರಿಸಿಕೊಂಡು, ಯಾವುದೇ ಸೌಲಭ್ಯದ ಮೂಲಕವಾಗಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರ ಮುಂದಾಗಬೇಕು ಎಂಬ ಅಭಿಪ್ರಾಯ ಸಂವಾದದಲ್ಲಿ ವ್ಯಕ್ತವಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.