ವಿಟ್ಲ: 9 ಮಂದಿ ನೌಕರರಿಗೆ ಕೊರೋನ ಪಾಸಿಟೀವ್ | ಹಾಳೆತಟ್ಟೆ ಫ್ಯಾಕ್ಟರಿ ಸೀಲ್ ಡೌನ್

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಇಲ್ಲಿನ ಠಾಣಾ ವ್ಯಾಪ್ತಿಯ ಕೊಡಂಗಾಯಿ ಸಮೀಪದ ಹಾಳೆತಟ್ಟೆ ತಯಾರಿಕಾ ಫ್ಯಾಕ್ಟರಿಯ 9 ಮಂದಿ ನೌಕರರಿಗೆ ಕೊರೊನಾ ಸೋಂಕು ದೃಡಪಟ್ಟಿರುವ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು  ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ‌.

ಅಂತರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಈ ಹಾಳೆತಟ್ಟೆ ತಯಾರಿಕಾ ಕಂಪೆನಿಯಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಸಹಿತ ಹೊರರಾಜ್ಯಗಳ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಮಾತ್ರವಲ್ಲದೆ ಸ್ಥಳೀಯ ಹಲವರ ಸಹಿತ ಸುಮಾರು 300ಕ್ಕೂ ಅಧಿಕ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಪಾಸಿಟಿವ್‌ ದೃಢಪಟ್ಟವರಲ್ಲಿ ಯಾವುದೇ ಕೊರೊನಾ ಲಕ್ಷಣಗಳು ಕಂಡುಬಾರದ ಹಿನ್ನೆಲೆಯಲ್ಲಿ ಅವರನ್ನು ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಲವು ಮಂದಿಯನ್ನು ಕ್ವಾರಂಟೈನ್ ನಲ್ಲಿರುವಂತೆ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.