ಭಾನುವಾರದ ಲಾಕ್‌ಡೌನ್ ರದ್ದು | ರಾತ್ರಿ ಕರ್ಫ್ಯೂ ಇನ್ನು ಮುಂದಿಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಅನ್ ಲಾಕ್-೩ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ ೨ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್‌ನ್ನು ರದ್ದುಗೊಳಿಸಿದೆ.ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಆ.೩೧ರ ತನಕ ಮುಂದುವರಿಯಲಿದೆ.‌‌

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿದ್ದು, ಆಗಸ್ಟ್ 5ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಸಹ ರದ್ದುಗೊಳಿಸಿದೆ.

ಕೋವಿಡ್ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ ೩೧ರವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿಲ್ಲ.ಸದ್ಯಕ್ಕೆ ಮೆಟ್ರೋ ಸಂಚಾರ, ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಉದ್ಯಾನವನ, ತೆರೆಯುವುದಕ್ಕೂ ಅನುಮತಿ ನೀಡಲಾಗಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರುವುದರ ಮೇಲಿದ್ದ ನಿರ್ಬಂಧವನ್ನು ಮುಂದುವರಿಸಲಾಗಿದೆ.
ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಆಗಸ್ಟ್ ೩೧ರ ವರೆಗೆ ಶಾಲಾ,ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಮುಚ್ಚಲ್ಪಡುತ್ತವೆ.ಆನ್‌ಲೈನ್, ದೂರಶಿಕ್ಷಣ ಕಲಿಕೆಗಳಿಗೆ ಅನುಮತಿ ಮುಂದುವರಿಸಲಾಗುವುದು.ಸಿನೆಮಾ ಮಂದಿರ, ಈಜುಕೊಳ, ಮನೋರಂಜನಾ ಉದ್ಯಾನವನ, ಚಿತ್ರಮಂದಿರ, ಬಾರ್‌ಗಳು,ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳು ಮತ್ತು ಅಂತಹ ಸ್ಥಳಗಳು, ಯೋಗ ಕೇಂದ್ರಗಳನ್ನು ಮತ್ತು ಜಿಮ್ನಾಷಿಯಂಗಳನ್ನು ತೆರೆಯಲು ಆಗಸ್ಟ್ ೫ರಿಂದ ಅನುಮತಿಸಲಾಗುವುದು. ಸಾಮಾಜಿಕ, ರಾಜಕೀಯ, ಕ್ರೀಡೆ,ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಗಳು ಹಾಗೂ ಇತರ ಬೃಹತ್ ಸಭೆ ಇತ್ಯಾದಿ ಕಾರ್ಯಚಟುವಟಿಕೆ ಪುನರಾರಂಭಿಸುವುದಕ್ಕೆ ದಿನಾಂಕವನ್ನು ಕೇಂದ್ರ ಸರಕಾರ ನಿರ್ಣಯಿಸಲಿದೆ.ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಇತರೆ ಆರೋಗ್ಯ ಶಿಷ್ಟಾಚಾರಗಳನ್ನು ಪಾಲಿಸುವುದರೊಂದಿಗೆ ಸ್ವಾತಂತ್ರ್ಯ ದಿನಾಚರಣೆಗೆ ಅನುಮತಿಸಲಾಗುವುದು.ಕಂಟೈನ್ಮೆಂಟ್ ಝೋನ್‌ಗಳಲ್ಲಿ ಆ.೩೧ರ ತನಕ ಲಾಕ್‌ಡೌನ್ ಮುಂದುವರಿಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.