ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ಬಿ.ಎಸ್ ಯಡಿಯರೂಪ್ಪ ಅವರ ನೇತೃತ್ವದ ಬಿಜೆಪಿ ಸರಕಾರಕ್ಕೆ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸಮೃದ್ಧ ಕರ್ನಾಟಕ ನಿರ್ಮಿಸುವ ಸಂಕಲ್ಪದೊಂದಿಗೆ ಮುಖ್ಯಮಂತ್ರಿಗಳ ಸಾಧನೆಯ ಪತ್ರವನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಶಾಸಕ ಸಂಜೀವ ಮಠಂದೂರು ಅವರು ಸಾಧನಾ ಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್.ಪಿ.ಜಿ., ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಶ್ರೀಮತಿ ಜಯಶ್ರೀ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ಸಿ. ನಾರಾಯಣ್, ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ ಮತ್ತು ಮತ್ತಿತರರು ಉಪಸ್ಥಿತರಿದ್ದರು.